ಸಂಪಾಜೆ: ರಸ್ತೆ ಬದಿಯ ಮೋರಿಗೆ ಬೈಕ್ ಢಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಛೇರಿ ಬಳಿ ಭಾನುವಾರ ರಾತ್ರಿ(ಆ.4ರಂದು) ನಡೆದಿದೆ.
ಮೈಸೂರಿನಿಂದ ಧರ್ಮಸ್ಥಳಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ಮೈಸೂರು ಮೂಲದ ಪವನ್ ಹಾಗೂ ಮನೋಜ್ ಮೃತ ಯುವಕರು.
ರಾತ್ರಿ ವೇಳೆ ಕೊಯಾನಾಡಿನ ಫಾರೆಸ್ಟ್ ಐ ಬಿ ಬಳಿ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಮೋರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಇಬ್ಬರು ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
Saval TV on YouTube