ಮನೆ ರಾಜ್ಯ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ಸ್ಥಳದಲ್ಲೇ ಸಾವು..!

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ಸ್ಥಳದಲ್ಲೇ ಸಾವು..!

0

ಹಾವೇರಿ : ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಹಲಗೇರಿ ಗ್ರಾಮದಲ್ಲಿ ನಡೆದಿದೆ.

ಮೃತ ಬೈಕ್ ಸವಾರನನ್ನು ಕವಲೆತ್ತು ಗ್ರಾಮದ ನಿವಾಸಿ ತಿಪ್ಪೇಶ ಕರೂರು (29) ಎಂದು ಗುರುತಿಸಲಾಗಿದ್ದು, ಬಾಪೂಜಿ ಫಾರ್ಮಸಿ ಕಾಲೇಜ್‌ನಲ್ಲಿ ಕ್ಲರ್ಕ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಕೆಲಸ ಮುಗಿಸಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನಾ ಸ್ಥಳಕ್ಕೆ ಹಲಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.