ಬೆಂಗಳೂರು: ನಗರದ ಕೆಂಗೇರಿ ಸಮೀಪ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಕೆಂಗೇರಿಯ ಆರ್.ಆರ್. ಡೆಂಟಲ್ ಕಾಲೇಜು ಸಮೀಪ ಇಂದು ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದೆ. ಮೃತರನ್ನು ಅತುಲ್ ಹಾಗೂ ಗೌರಿಶಂಕರ್ ಎಂದು ಗುರುತಿಸಲಾಗಿದೆ.

ಮೈಸೂರು ಕಡೆಯಿಂದ ಬೆಂಗಳೂರಿನತ್ತ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಾಹನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.














