ಮನೆ ಅಪರಾಧ ಪೊಲೀಸ್ ಠಾಣೆಯಲ್ಲೇ ಬೈಕ್ ಕಳವು: ಇಬ್ಬರ ಬಂಧನ

ಪೊಲೀಸ್ ಠಾಣೆಯಲ್ಲೇ ಬೈಕ್ ಕಳವು: ಇಬ್ಬರ ಬಂಧನ

0

ಚಾಮರಾಜನಗರ: ಪೊಲೀಸ್ ಠಾಣೆಯ ಗೇಟ್​​ನ ಬೀಗ ಮುರಿದು ಒಳ ನುಗ್ಗಿ ಜಪ್ತಿ ಮಾಡಿ ಇಡಲಾಗಿದ್ದ ಬೈಕ್​​ ಕದ್ದಿರುವ ಘಟನೆ ಚಾಮರಾಜನಗರದ ಸಿಇಎನ್ ಠಾಣೆಯಲ್ಲಿ ನಡೆದಿದೆ.

Join Our Whatsapp Group

ಬೈಕ್ ಕದ್ದೊಯ್ದಿದ್ದ ಚಾಮರಾಜನಗರದ ಅರ್ಫಾಜ್ ಹಾಗೂ ಇಮ್ರಾನ್ ಎಂಬ ಆರೋಪಿಗಳನ್ನು ಪಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಭಾನುವಾರ ತಡರಾತ್ರಿ ಅರ್ಫಾಜ್ ಮತ್ತು ಇಮ್ರಾನ್ ಕಾಂಪೌಂಡ್ ಹಾರಿ ಠಾಣಾ ಆವರಣಕ್ಕೆ ಬಂದು ಗೇಟಿನ ಬೀಗ ಮುರಿದಿದ್ದಾರೆ‌‌. ಬಳಿಕ, ಎನ್​​ಡಿಪಿಎಸ್ ಕಾಯ್ದೆಯಡಿ ಜಪ್ತಿ ಮಾಡಿದ್ದ ಹೊಂಡಾ ಶೈನ್ ಬೈಕ್​ನ್ನು ಕದ್ದೊಯ್ದಿದ್ದರು.

ಬೆಳಗ್ಗೆ ಠಾಣೆಗೆ ಬಂದ ಪೊಲೀಸರು ಗೇಟ್​​ನ ಬೀಗ ಇಲ್ಲದಿರುವುದನ್ನು ಕಂಡು ಸಿಸಿಟಿವಿ ಪರಿಶೀಲಿಸಿದಾಗ ಕಳ್ಳರು ಬೈಕ್ ಕದ್ದೊಯ್ದಿರುವುದು ಗೊತ್ತಾಗಿದೆ. ಕೂಡಲೇ ಚಾಮರಾಜನಗರ ಪಟ್ಟಣ ಠಾಣೆಗೆ ದೂರು ಕೊಟ್ಟಿದ್ದಾರೆ‌. ಸಿಸಿಟಿವಿ ದೃಶ್ಯ ಆಧರಿಸಿ ಇಬ್ಬರನ್ನು ಬಂಧಿಸಿ, ಬೈಕ್ ವಶಕ್ಕೆ ಪಡೆಯಲಾಗಿದೆ.

ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.