ಕಾರ್ಕಳ: ಖಾಸಗಿ ಶಾಲಾ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯಾರು-ಜೋಡುಕಟ್ಟೆ ಬಳಿ ನ.23ರ ಶನಿವಾರ ಬೆಳಗ್ಗೆ ನಡೆದಿದೆ.
ಮೃತಪಟ್ಟವರು ಸ್ಥಳೀಯ ನಿವಾಸಿ ಅಜಿತ್ ಕುಮಾರ್ ಎಂದು ತಿಳಿದು ಬಂದಿದೆ.
ಅಪಘಾತ ಸಂದರ್ಭ ಶಾಲೆಯ ಬಸ್ ನಲ್ಲಿ ವಿದ್ಯಾರ್ಥಿಗಳು ಇರಲಿಲ್ಲ. ಖಾಲಿ ಬಸ್ ಎನ್ನಲಾಗಿದೆ. ಬಸ್ ಮದ್ಯ ಭಾಗಕ್ಕೆ ಬೈಕ್ ಢಿಕ್ಕಿಯಾಗಿದ್ದು, ತಲೆಗೆ ತೀವ್ರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರ್ಕಳ ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.














