ಮನೆ ರಾಜ್ಯ ಬಿಕ್ಲು ಶಿವ ಕೊಲೆ ಕೇಸ್​; ನಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಣೆ – ಭೈರತಿ ಬಸವರಾಜ್​​...

ಬಿಕ್ಲು ಶಿವ ಕೊಲೆ ಕೇಸ್​; ನಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಣೆ – ಭೈರತಿ ಬಸವರಾಜ್​​ ಪೊಲೀಸರ ವಶಕ್ಕೆ..!

0

ಬೆಂಗಳೂರು : ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಕೊನೆಗೂ ಕೆ.ಆರ್​.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್​ನ್ನು ದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಹಿನ್ನೆಲೆ ಭೈರತಿ ಬಸವರಾಜ್​​ ತಲೆಮರೆಸಿಕೊಂಡಿದ್ದರು. ಇದೀಗ ಇಂಡಿಗೋ 6E683 ವಿಮಾನದಲ್ಲಿ ಅಹಮದಾಬಾದ್​​ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ವಶಕ್ಕೆ ಪಡೆದುಕೊಂಡಿದ್ದಾರೆ. ಜುಲೈ 15ರಂದು ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ನಡೆದಿತ್ತು. ಜಾಗದ ವಿಚಾರಕ್ಕೆ ಸಂಬಂಧಿಸಿದ ಈ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿತ್ತು.

ಪ್ರಕರಣದಲ್ಲಿ ಭೈರತಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಅವರಿಗೆ ಬಂಧನ ಭೀತಿ ಎದುರಾಗಿದೆ. ಹೈಕೋರ್ಟ್ ಆದೇಶದ ಬೆನ್ನಲ್ಲೇ ಭೈರತಿ ನಾಪತ್ತೆಯಾಗಿದ್ದಾರೆ. ಸಿಐಡಿ ತಂಡ ಬೆಂಗಳೂರು ನಗರದಾದ್ಯಂತ ಶೋಧ ನಡೆಸಿದೆ. ಅವರು ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ದುಬೈಗೆ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಭೈರತಿ ಬಸವರಾಜ್ ಪ್ರಸ್ತುತ ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಪೊಲೀಸರು ಅವರಿಗೆ ಲುಕ್ ಔಟ್ ನೋಟಿಸ್ ಹೊರಡಿಸಲು ಸಿದ್ಧತೆ ನಡೆಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು ಸಿಗದಿದ್ದರೆ, ಅವರು ಶರಣಾಗುವುದು ಅನಿವಾರ್ಯವಾಗಿದೆ.