ಮನೆ ರಾಜ್ಯ ವಿಜಯವಾಡದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ

ವಿಜಯವಾಡದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ

0

ಅಮರಾವತಿ : ವಿಜಯವಾಡದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ.

ಟೇಕಾಫ್‌ಗಾಗಿ AI 9841 ವಿಮಾನವನ್ನು ರನ್‌ವೇಗೆ ತರುತ್ತಿದ್ದಾಗ ಹದ್ದು ವಿಮಾನದ ಮೂತಿಗೆ ಡಿಕ್ಕಿ ಹೊಡೆದಿದೆ. ವಿಮಾನದಲ್ಲಿ 90 ಜನ ಪ್ರಯಾಣಿಕರಿದ್ದರು. ಬಳಿಕ ವಿಮಾನ ಹಾರಾಟವನ್ನು ರದ್ದುಗೊಳಿಸಿ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಯಿತು.

ಈ ವಿಮಾನ ಇಂದು ವಿಜಯವಾಡದಿಂದ ಹೊರಟು ಬೆಂಗಳೂರು ತಲುಪಬೇಕಿತ್ತು. ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳು ವಿಮಾನದ ಪರಿಶೀಲನೆ ನಡೆಸಿದ್ದಾರೆ.