ಪಿರಿಯಾಪಟ್ಟಣ: ಬಿಜೆಪಿ ಹಾಗೂ ಜೆಡಿಎಸ್ಗೆ ಸೈದ್ಧಾಂತಿಕ ನೆಲೆಗಟ್ಟಿಲ್ಲ. ಜನಸಾಮಾನ್ಯರ ಕಷ್ಟಗಳು ಅರಿವಾಗುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.
ತಾಲ್ಲೂಕಿನ ದೊಡ್ಡ ಹೊನ್ನೂರು ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಜನಸಾಮಾನ್ಯರ ಬವಣೆಗಳನ್ನು ಅರ್ಥ ಮಾಡಿಕೊಳ್ಳದೆ, ಸ್ವಾರ್ಥ ಮತ್ತು ಭ್ರಷ್ಟಾಚಾರದ ಆಡಳಿತ ವನ್ನು ನಡೆಸಲು ಹವಣಿಸುತ್ತಿವೆ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.
ಆಡಳಿತ ಪಕ್ಷವು ಸಂವಿಧಾನಾತ್ಮಕ ಮತ್ತು ಪ್ರಜಾಸತ್ತಾತ್ಮಕ ಸಿದ್ಧಾಂತಗಳನ್ನು ಗಾಳಿಗೆ ತೂರಿ ಆಡಳಿತ ನಡೆಸಿ ಜನಸಾಮಾನ್ಯರ ಮೇಲೆ ಇಲ್ಲಸಲ್ಲದ ಕಾಯ್ದೆಗಳನ್ನು ಜಾರಿಗೊಳಿಸಿ ಸಂಕಷ್ಟಕ್ಕೆ ದೂಡುತ್ತಿದೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜನಸಾಮಾನ್ಯರಿಗೆ, ರೈತರಿಗೆ ಹಾಗೂ ಕಾರ್ಮಿಕರಿಗೆ ಉಪಯುಕ್ತವಾದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿತ್ತು. ಇವು ಇಂದಿಗೂ ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪುತ್ತಿವೆ ಎಂದು ತಿಳಿಸಿದರು.
ಯತೀಂದ್ರ ಸಿದ್ದರಾಮಯ್ಯ ಅವರನ್ನು ಕೊಪ್ಪ ಗ್ರಾಮದಲ್ಲಿ ಜೆಸಿಬಿ ಯಂತ್ರದ ಮೂಲಕ ಬೃಹತ್ ಹೂವಿನ ಹಾರ ಹಾಕುವ ಮೂಲಕ ಸ್ವಾಗತಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ , ಮಾಜಿ ಶಾಸಕ ಕೆ.ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್ , ಕಾರ್ಯದರ್ಶಿ ಸಮಿವುಲ್ಲಾ ಖಾನ್, ಟಿ.ಡಿ.ಗಣೇಶ್, ನಿತಿನ್ ವೆಂಕಟೇಶ್, ಡಿ.ಟಿ.ಸ್ವಾಮಿ, ಬಿ.ವಿ.ಅನಿತಾ, ಕೆ.ಹೊಲದಪ್ಪ, ರೆಹಮತ್ ಜಾನ್ ಬಾಬು, ಸುಮಾ, ಗೀತಾ, ಕಲ್ಯಾಣಪ್ಪ, ಪಿ.ಮಹದೇವ್, ಡಿ.ಎ. ಜವರಪ್ಪ, ಗ್ರಾ.ಪಂ. ಅಧ್ಯಕ್ಷ ಸುಮಾ ಪ್ರಭಾಕರ, ಉಪಾಧ್ಯಕ್ಷೆ ಗೀತಾ ರಾಮು, ಸದಸ್ಯರಾದ ರಘು, ರಘು ಬಾಲಾಜಿ, ನಿಸಾರ್ ಅಹ್ಮದ್, ಮಂಜುನಾಥ್, ನವೀನ್, ಪಿ.ಪಿ.ಮಹದೇವ್ ಇದ್ದರು.