ಮನೆ ರಾಜ್ಯ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ: ಕೆ ಅಣ್ಣಾಮಲೈ 

ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ: ಕೆ ಅಣ್ಣಾಮಲೈ 

0

ಮೈಸೂರು: ಬಿಜೆಪಿಗೆ ಕರ್ನಾಟಕ ದಕ್ಷಿಣ ಭಾರತದ ಹೆಬ್ಬಾಗಿಲು ಆಗಿದ್ದು, ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ  ವಿಶ್ವಾಸ ವ್ಯಕ್ತ ಪಡಿಸಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅಣ್ಣಾಮಲೈ, ದೇಶದ ಜನತೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನಂಬಿಕೆ ಇಟ್ಟಿದ್ದಾರೆ, ಕರ್ನಾಟಕದಲ್ಲಿ ಬಿಜೆಪಿ ಗೆಲುವು ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಪಕ್ಷದ ಗೆಲುವಿಗೆ ನಾಂದಿ ಹಾಡಲಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಈಶಾನ್ಯ ರಾಜ್ಯಗಳಲ್ಲಿ ಕಾಣುತ್ತಿರುವಂತೆ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ತನ್ನ ವರ್ಚಸ್ಸು ಕಳೆದುಕೊಂಡಿದೆ. ಸಂಪನ್ಮೂಲ ಕೊರತೆಯಿಂದ ಕಷ್ಟಕರವಾಗಿರುವ ಹಳೆಯ ಪಿಂಚಣಿ ಯೋಜನೆಯನ್ನು ಪುನಃ ಪರಿಚಯಿಸುವ ಭರವಸೆ ನೀಡುವ ಮೂಲಕ ಹಿಮಾಚಲ ಪ್ರದೇಶದಲ್ಲಿ ಮಾತ್ರ ಅಧಿಕಾರಕ್ಕೆ ಬರಲು ಯಶಸ್ವಿಯಾಗಿದೆ ಎಂದು ಹೇಳಿದರು.

ಅಧಿಕಾರಕ್ಕೆ ಬಂದರೆ ಕುಟುಂಬದ ಮಹಿಳೆಯರಿಗೆ ಮಾಸಿಕ 2000 ರೂ ನೀಡುವುದಾಗಿ ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. 1000 ರೂ.ನೀಡುವುದಾಗಿ ವಾಗ್ದಾನ ಮಾಡಿದ ತಮಿಳುನಾಡಿನ  ಡಿಎಂಕೆ ಮತ್ತು ಕಾಂಗ್ರೆಸ್ ಸರ್ಕಾರದಿಂದ ಇಂತಹ ಸುಳ್ಳು ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಮಹಿಳೆಯರಿಗೆ ತಿಂಗಳಿಗೆ 2000 ರು ನೀಡಲು ಮಾಸಿಕವಾಗಿ 4,000 ಕೋಟಿ ರೂಪಾಯಿ ಬೇಕಿರುವ ಯೋಜನೆಯನ್ನು ಅನುಷ್ಠಾನಗೊಳಿಸಲು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೋಟುಗಳನ್ನು ಮುದ್ರಿಸುತ್ತಾರೆಯೇ? ಎಂದು ಅಣ್ಣಾಮಲೈ ಪ್ರಶ್ನಿಸಿದ್ದಾರೆ.

ಬಿಜೆಪಿ ಸರ್ಕಾರವು ಜಲ್ ಮಿಷನ್, ಕಿಸ್ಸಾನ್ ಸನ್ಮಾನ್ ಮತ್ತು ಆಯುಷ್ಮಾನ್ ಭಾರತ್ನಂತಹ ಯೋಜನೆಗಳೊಂದಿಗೆ 135 ಕೋಟಿ ಜನರಿಗೆ  ನೀಡಲು ಪ್ರಾರಂಭಿಸಿರುವುದರಿಂದ ಕಾಂಗ್ರೆಸ್ ಗೆ ಆತಂಕ ಎದುರಾಗಿದೆ.  1.05 ಕೋಟಿಗೂ ಹೆಚ್ಚು ಮನೆಗಳನ್ನು ಹೊಂದಿರುವ ಕರ್ನಾಟಕದಲ್ಲಿ ಕೇವಲ ಶೇ.17 ರಷ್ಟು ಮನೆಗಳಿಗೆ ಪೈಪ್ ಮೂಲಕ ಕುಡಿಯುವ ನೀರನ್ನು ಕಾಂಗ್ರೆಸ್ ಪೂರೈಸಿತ್ತು, ಆದರೆ ಈಗ ಬಿಜೆಪಿ ಸರ್ಕಾರವು ಶೇ. 63ರಷ್ಟು ಕುಟುಂಬಗಳಿಗೆ ನೀರು ಒದಗಿಸಿದೆ ಎಂದರು.

ಒಂದು ವರ್ಷದಲ್ಲಿ ಶೇ.100 ರಷ್ಟು ಸಂಪೂರ್ಣ ಸಾಧಿಸಲಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಸ್ಥಳೀಯ ಆರ್ಥಿಕತೆಯಲ್ಲಿ ಹೂಡಿಕೆಯನ್ನು ಉತ್ತೇಜಿಸುತ್ತದೆ ಮತ್ತು ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ಅಣ್ಣಾಮಲೈ ಹೇಳಿದರು.