ಬೆಂಗಳೂರು : ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸೋದು ದೇವರ ಕೆಲಸ ಅಲ್ಲ, ಎಲ್ಲ ಮಾಡಿದ್ದು ಮನುಸ್ಮೃತಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ಜಾರಿಯ 75ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
RSS ನವರು ಮನುಸ್ಮೃತಿ ಪರವಾಗಿರುವುದರಿಂದಲೇ ನಮ್ಮ ಸಂವಿಧಾನ ವಿರೋಧಿಸುತ್ತಾರೆ. ಪೇಜಾವರ ಶ್ರೀಗಳು ಸಂವಿಧಾನ ಬಗ್ಗೆ ಆಡಿದ ಮಾತನ್ನು ಪ್ರಸ್ತಾಪಿಸಿದ ಸಿಎಂ, ಆ ರೀತಿ ಹೇಳುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು.
ಇಡೀ ದೇಶದ ಪಾಲಿಗೆ ಇಂದು ಸಂವಿಧಾನ ದಿನ
ಬಸವಣ್ಣನವರು 850 ವರ್ಷಗಳ ಹಿಂದೆ ಜಾತಿ ವ್ಯವಸ್ಥೆಯನ್ನು, ಜಾತಿ ಅಸಮಾನತೆಯನ್ನು ವಿರೋಧಿಸಿದ್ದರು. ಆದರೆ ಇವತ್ತಿಗೂ ಜಾತಿ ವ್ಯವಸ್ಥೆ ಹೋಗಿಲ್ಲ
ಬಾಯಲ್ಲಿ ಬಸವಾದಿ ಶರಣರ ವಚನ ಹೇಳೋದು. ಆಮೇಲೆ, ನೀನು ಯಾವ ಜಾತಿ ಅಂತ ಕೇಳ್ತಾರೆ. ಈಗಲೂ ಇವನಾರವ, ಇವನಾರವ ಅಂತಲೇ ಕೇಳುತ್ತಿದ್ದಾರೆ ಹೊರತು, ಇವ ನಮ್ಮವ ಅಂತ ಹೇಳುತ್ತಲೇ ಇಲ್ಲ ಎಂದು ವ್ಯಂಗ್ಯವಾಡಿದರು
ಸಂವಿಧಾನದ ಧ್ಯೇಯೋದ್ದೇಶಗಳು ಎಷ್ಟರ ಮಟ್ಟಿಗೆ ಜಾರಿಯಾಗಿವೆ, ಏಕಿನ್ನೂ ಸಮಾನತೆಯ ಸಮಾಜ ನಿರ್ಮಾಣ ಆಗಿಲ್ಲ ಎನ್ನುವುದನ್ನು ಅವಲೋಕನ ಮಾಡಿಕೊಳ್ಳಬೇಕಿದೆ. ಸಂವಿಧಾನ ಜಾರಿ ಸಭೆಯಲ್ಲಿ ಅಂಬೇಡ್ಕರ್ ಅವರು ಆಡಿದ ಎಚ್ಚರಿಕೆಯ ಮಾತುಗಳನ್ನು ನಾವು ಮರೆಯಬಾರದು. ಪ್ರತಿಯೊಬ್ಬರಿಗೂ ಒಂದು ಓಟು, ಒಂದು ಮೌಲ್ಯ ಸಿಕ್ಕಿದೆ. ಆದರೆ ಎಲ್ಲರಿಗೂ ಆರ್ಥಿಕ ಸ್ವಾತಂತ್ರ್ಯ ಸಿಕ್ಕಿಲ್ಲ. ನಾವು ವೈರುದ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಾಮಾಜಿಕ, ಆರ್ಥಿಕ ಅಸಮಾನತೆ ಹೋಗಲಾಡಿಸದಿದ್ದರೆ ರಾಜಕೀಯ ಪ್ರಜಾಪ್ರಭುತ್ವ ಯಶಸ್ವಿ ಆಗಲ್ಲ ಎನ್ನುವ ಎಚ್ಚರಿಕೆ ನೀಡಿದ್ದರು.