ಮನೆ ರಾಜ್ಯ ಏಪ್ರಿಲ್ 9ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಿಎಂ ಬೊಮ್ಮಾಯಿ

ಏಪ್ರಿಲ್ 9ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಿಎಂ ಬೊಮ್ಮಾಯಿ

0

ಶಿವಮೊಗ್ಗ: ಏಪ್ರಿಲ್ 9ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

Join Our Whatsapp Group

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತನಾಡಿದ ಅವರು,  ಒಂದು ಕ್ಷೇತ್ರಕ್ಕೆ ಮೂವರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಎಲ್ಲಾ ರೀತಿಯ ಪ್ರಕ್ರಿಯೆ ಮುಗಿಸಿ ದೆಹಲಿಗೆ ಪಟ್ಟಿ ಕಳುಹಿಸಲಾಗಿದೆ. 7-8 ರಂದು ಸಭೆ ಸೇರಿ ಅಂತಿಮ ಪಟ್ಟಿ ಸಿದ್ದಪಡಿಸುತ್ತೇವೆ. ಬಿಜೆಪಿ ಗೆಲ್ಲುವ ಪಕ್ಷ, ಹೀಗಾಗಿ ಟಿಕೆಟ್ಗಾಗಿ ಪೈಪೋಟಿ ಸಾಮಾನ್ಯ ಎಂದು ಹೇಳಿದ್ದಾರೆ.

ಅಥಣಿ ವಿಧಾನಸಭಾ ಕ್ಷೇತ್ರ ಟಿಕೆಟ್ ಗಾಗಿ ಹಾಲಿ ಶಾಸಕ ಮಹೇಶ್ ಕುಮಟಳ್ಳಿ ಮತ್ತು ವಿಧಾನ್ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ನಡುವೆ ಪೈಪೋಟಿ ವಿಚಾರವಾಗಿ ಮಾತನಾಡಿದ ಅವರು ನಾನು ಈಗಾಗಲೇ ಮಹೇಶ್ ಕುಮಟಳ್ಳಿ ಅವರ ಜೊತೆ ಮಾತನಾಡಿದ್ದೇನೆ ಎಂದರು.

ಕಾಂಗ್ರೆಸ್ ನವರು ಕಳೆದ ಬಾರಿಗಿಂತ ಹೀನಾಯವಾಗಿ ಸೋಲುತ್ತಾರೆ. ಕಾಂಗ್ರೆಸ್ ಗೆ ಇನ್ನೂ 60 ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳು ಸಿಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ನವರು ನಮ್ಮವರನ್ನು ಸಂಪರ್ಕ ಮಾಡಿದ್ದಾರೆ. 2ನೇ ಪಟ್ಟಿ ಸಿದ್ಧತೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಪರ್ಕಿಸಿದ್ದರು ಎಂದು ಹೇಳಿದರು.

ಹಿಂದಿನ ಲೇಖನದಿವಂಗತ ಆರ್.ಧ್ರುವನಾರಾಯಣ್ ಪತ್ನಿ ವೀಣಾ ನಿಧನ
ಮುಂದಿನ ಲೇಖನಸ್ಮಶಾನ ಭೂಮಿ: ಎಲ್ಲರೂ ಸ್ವಾರ್ಥಿಗಳಾಗಿ ಬದಲಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಹೈಕೋರ್ಟ್