ಮನೆ ರಾಜಕೀಯ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ನಿಶ್ಚಿತ: ಬಿಎಸ್ ವೈ ವಿಶ್ವಾಸ

ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ನಿಶ್ಚಿತ: ಬಿಎಸ್ ವೈ ವಿಶ್ವಾಸ

0

ಬೆಂಗಳೂರು(Bengaluru): ನಮ್ಮ‌ ಮುಂದಿನ ಯಾತ್ರೆ ವಿಜಯ ಯಾತ್ರೆ. ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನುಡಿದರು.

ಇಂದು ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದ ಸಾಧನೆಗಳನ್ನ ಜನರ ಮನೆಗಳಿಗೆ ತಲುಪಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಪರಿಶಿಷ್ಟ ರ ಕಲ್ಯಾಣಕ್ಕೆ ನಾವು ಕೆಲಸ ಮಾಡಿದ್ದೇವೆ. ಅನೇಕ ಮನೆಗಳಿಗೆ ವಿದ್ಯುತ್ ಇರಲಿಲ್ಲ. ಆ ಮನೆಗಳಿಗೆ ವಿದ್ಯುತ್ ಕೊಡುವ ಕೆಲಸ ಮಾಡಿದ್ದೇವೆ. ನಮ್ಮ‌ಕಾರ್ಯಕರ್ತರು ನಮ್ಮ ಯೋಜನೆ ಮನದಟ್ಟು ಮಾಡಿಕೊಂಡು ಮನೆ ಮನೆಗೆ ತಲುಪಿಸಬೇಕು ಎಂದರು.

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಜನರಿಗೆ ತಲುಪಿದೆ. 43 ಲಕ್ಷಕ್ಕೂ ಹೆಚ್ಚು ರೈತರಿಗೆ ಡಿಬಿಟಿ ಮೂಲಕ ಹಣ ತಲುಪಿಸಿದ್ದೇವೆ. ರಾಜ್ಯದ ಪ್ರತಿ ಮನೆಗೆ ಶುದ್ದವಾದ ಕುಡಿಯೋ ನೀರು ಕೊಡುವ ಮೂಲಕ ಮಧ್ಯಮ ವರ್ಗದವರಿಗೆ ಗ್ಯಾಸ್- ಪಡಿತರ ತಲುಪಿಸುವ ಮೂಲಕ ಕೆಲಸ ಮಾಡಿದ್ದೇವೆ ಎಂದು ಹೇಳಿದರು.

ಹಿಂದಿನ ಲೇಖನಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ʼಒಂದು ಸಣ್ಣ ಸಾಕ್ಷಿಯೂ ಇಲ್ಲʼ ಎಂದು ಆರೋಪಿಯನ್ನು ಖುಲಾಸೆಗೊಳಿಸಿದ ಸುಪ್ರೀಂ
ಮುಂದಿನ ಲೇಖನಓಂ ಅಸ್ಯ ಶ್ರೀ ರಾಮರಕ್ಷಾ ಸ್ತೋತ್ರಮಂತ್ರಸ್ಯ