ಮನೆ ರಾಜ್ಯ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಈ ಬಾರಿ 28 ಸ್ಥಾನ ಗೆಲ್ಲುತ್ತೇವೆ: ಕೆ.ಎಸ್ ಈಶ್ವರಪ್ಪ  

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಈ ಬಾರಿ 28 ಸ್ಥಾನ ಗೆಲ್ಲುತ್ತೇವೆ: ಕೆ.ಎಸ್ ಈಶ್ವರಪ್ಪ  

0

ಶಿವಮೊಗ್ಗ: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಈ ಬಾರಿ 28 ಸ್ಥಾನವನ್ನೂ ಗೆಲ್ಲುತ್ತೇವೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್-ಬಿಜೆಪಿ ಮೈತ್ರಿ ಕುರಿತು ಶಿವಮೊಗ್ಗ ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿಸುವ ಎಲ್ಲರೂ ಒಟ್ಟಾಗಿದ್ದೇವೆ. ಕಾಂಗ್ರೆಸ್ ನಿರ್ನಾಮ ಮಾಡುವ ದೃಷ್ಠಿಯಿಂದ ಹಾಗೂ ದೇಶವನ್ನು ಉಳಿಸುವ ಸಲುವಾಗಿ ಮೈತ್ರಿ ಮಾಡಲಾಗುತ್ತದೆ. ಬಿಜೆಪಿ –ಜೆಡಿಎಸ್ ಮೈತ್ರಿಯಿಂದ ಈ ಬಾರಿ 28 ಸ್ಥಾನವನ್ನೂ ಗೆಲ್ಲುತ್ತೇವೆ ಎಂದರು.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ 1 ಸ್ಥಾನ ಗೆದ್ದಿತ್ತು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲ್ಲ  ಎಂದು ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದರು.

ಹಿಂದಿನ ಲೇಖನನಾಗಮಂಗಲ: ಕಟ್ಟಡದಲ್ಲಿ ಆತಂಕ ಸೃಷ್ಟಿಸಿದ ರಕ್ತದ ಕಲೆ: ತನಿಖೆ ಕೈಗೊಂಡ ಪೊಲೀಸ್ ಇಲಾಖೆ.!  
ಮುಂದಿನ ಲೇಖನಆಹ್ವಾನ ಇಲ್ಲದೆ ಜಿ20 ಸಭೆಗೆ ನಾನು ಹೇಗೆ ಹೋಗಲಿ: ಮಲ್ಲಿಕಾರ್ಜುನ ಖರ್ಗೆ