ಮನೆ ರಾಜ್ಯ ಕರ್ನಾಟಕ ಬಂದ್ ಗೆ ಬಿಜೆಪಿ, ಜೆಡಿಎಸ್ ಬೆಂಬಲ: ಪೊಲೀಸ್ ಬಿಗಿ ಬಂದೋ ಬಸ್ತ್

ಕರ್ನಾಟಕ ಬಂದ್ ಗೆ ಬಿಜೆಪಿ, ಜೆಡಿಎಸ್ ಬೆಂಬಲ: ಪೊಲೀಸ್ ಬಿಗಿ ಬಂದೋ ಬಸ್ತ್

0

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿಯಿದ್ದರೂ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ಖಂಡಿಸಿ ರಾಜ್ಯದಲ್ಲಿ ಇಂದು (ಸೆ.29) ಬಂದ್ ಆಚರಿಸಲಾಗುತ್ತಿದೆ. ಈ ಬಂದ್ ಗೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಕೂಡಾ ಬೆಂಬಲ ಸೂಚಿಸಿದ್ದು, ಬಂದ್ ತೀವ್ರತೆ ಹೆಚ್ಚಿದೆ.

Join Our Whatsapp Group

ಬಂದ್ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರಿನಲ್ಲಿ ಮಧ್ಯರಾತ್ರಿಯವರೆಗೆ ಸೆಕ್ಷನ್ 144 ವಿಧಿಸಲಾಗಿದ್ದು, ಗುಂಪು ಸೇರುವಂತಿಲ್ಲ, ಬಲವಂತದ ಬಂದ್ ಮಾಡುವಂತಿಲ್ಲ, ಅಂಗಡಿ ಮುಂಗಟ್ಟುಗಳನ್ನು ಮುಚ್ಚಿವಂತಿಲ್ಲ, ವಾಹನ ತಡೆಯುವಂತಿಲ್ಲ ಎಂದು ಆಯುಕ್ತರು ಎಚ್ಚರಿಸಿದ್ದಾರೆ.

ಇಂದಿನ ಕರ್ನಾಟಕ ಬಂದ್ ಗೆ ಓಲಾ ಊಬರ್ ಮತ್ತು ಹೋಟೆಲ್ ಸಂಘಟನೆಗಳು ಬೆಂಬಲ ಸೂಚಿಸಿದೆ. ಹೀಗಾಗಿ ಇಂದು ಓಲಾ ಊಬರ್ ಟ್ಯಾಕ್ಸಿಗಳು ರಸ್ತೆಗಿಳಿಯಲ್ಲ. ಹೋಟೆಲ್ ಗಳು ತೆರೆಯಲ್ಲ. ಚಿತ್ರಮಂದರಿ ಕೂಡಾ ಬೆಂಬಲ ನೀಡಿದ್ದು, ಸಂಜೆ 6 ಗಂಟೆಯ ತನಕ ಯಾವುದೇ ಚಿತ್ರ ಪ್ರದರ್ಶನ ಇರುವುದಿಲ್ಲ.

ಕರುನಾಡ ಕಾರ್ಮಿಕ ಸಂಘಟನೆ ಕೆಆರ್ ಮಾರುಕಟ್ಟೆಯಲ್ಲಿ ವಿಭಿನ್ನ ರೀತಿ ಪ್ರತಿಭಟನೆ ಮಾಡುತ್ತಿದ್ದಾರೆ.  ಕಿವಿಗೆ ಚೆಂಡು ಹಾಕಿಕೊಂಡು, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನೆ ಮಾಡುವುದಕ್ಕೆ ಶುರು ಮಾಡುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಪ್ರತಿಭಟಿಸುತ್ತಿದ್ದವರನ್ನು ಕೆಆರ್​ ಮಾರುಕಟ್ಟೆಯಿಂದ ಹೊರ ಕಳುಹಿಸಿದರು.

ಮುಂಜಾಗ್ರತಾ ಕ್ರಮವಾಗಿ ಕೆಲ ರೌಡಿಶೀಟರ್​ಗಳು ಸೇರಿದಂತೆ 150 ಜನರನ್ನು ಪೊಲೀಸರು​​ ವಶಕ್ಕೆ ಪಡೆದುಕೊಂಡಿದ್ದಾರೆ. 2016ರಲ್ಲಿ ಕಾವೇರಿ ನೀರಿಗಾಗಿ ಕರೆ ನೀಡಿದ್ದ ಬಂದ್​​ ವೇಳೆ ಕಲ್ಲುತೂರಿ, ಬೆಂಕಿ ಹಚ್ಚಿದ್ದ ಹಲವು ರೌಡಿಶೀಟರ್​ಗಳನ್ನು ವಶಕ್ಕೆ ಪಡೆದಿದ್ದಾರೆ.

ಕರಾವಳಿಯಲ್ಲಿ ನೈತಿಕ ಬೆಂಬಲ ಮಾತ್ರ: ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಬಂದ್ ಗೆ ನೈತಿಕ ಬೆಂಬಲ ಮಾತ್ರ ವ್ಯಕ್ತವಾಗಿದೆ. ಖಾಸಗಿ ಬಸ್ ಸಂಚಾರ ಎಂದಿನಂತಿದ್ದು, ಹೋಟೆಲ್, ಅಂಗಡಿ ಮುಂಗಟ್ಟುಗಳು ಕೂಡಾ ತೆರೆದಿವೆ.

ಹಿಂದಿನ ಲೇಖನBMRCL: 08 ಉಪ ಮುಖ್ಯ ಇಂಜಿನಿಯರ್, ಅಡಿಷನಲ್ ಮುಖ್ಯ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮುಂದಿನ ಲೇಖನಮಂಡ್ಯ: ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರ ಪ್ರತಿಭಟನೆ