ಬೆಂಗಳೂರು: ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರಿಗೆ ಲಘು ಹೃದಯಾಘಾತವಾಗಿದೆ.
ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ವೈದ್ಯಕೀಯ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಬುಧವಾರ ಸಂಜೆ ತಮ್ಮ ಮನೆಯಲ್ಲಿ ಜಿಮ್ ಮಾಡುತ್ತಿದ್ದಾಗ ಉದಯ್ ಗರುಡಾಚಾರ್ ಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಲಘು ಹೃದಯಾಘಾತವಾಗಿದೆ. ಕೂಡಲೇ ಜಯನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತುರ್ತು ಚಿಕಿತ್ಸೆ ನೀಡಿದ ವೈದ್ಯರು ಆಂಜಿಯೋಪ್ಲಾಸ್ಟಿ ಮಾಡಿದ್ದಾರೆ.
Saval TV on YouTube