ಮನೆ ರಾಜ್ಯ ಬಿಜೆಪಿ-ಜೆಡಿಎಸ್ ಅಧಿಕೃತ ಮೈತ್ರಿ: ಬಿಜೆಪಿಯ ಶಿವಕುಮಾರ್ ಮೈಸೂರಿನ ನೂತನ ಮೇಯರ್

ಬಿಜೆಪಿ-ಜೆಡಿಎಸ್ ಅಧಿಕೃತ ಮೈತ್ರಿ: ಬಿಜೆಪಿಯ ಶಿವಕುಮಾರ್ ಮೈಸೂರಿನ ನೂತನ ಮೇಯರ್

0

ಮೈಸೂರು(Mysuru): ಮೈಸೂರು ಮಹಾನಗರಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಅಧಿಕೃತವಾಗಿ ಮೈತ್ರಿ ಮಾಡಿಕೊಂಡಿದ್ದು, ನೂತನ್ ಮೇಯರ್ ಆಗಿ ಬಿಜೆಪಿಯ ಶಿವಕುಮಾರ್ ಆಯ್ಕೆಯಾಗಿದ್ದಾರೆ.

ಇಂದು ಚುನಾವಣಾ ಪ್ರಕ್ರಿಯೆ ನಡೆದಿದ್ದು, ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಜೆಡಿಎಸ್ ಅಭ್ಯರ್ಥಿ ಕೆ.ವಿ.ಶ್ರೀಧರ್ ನಾಮಪತ್ರ ವಾಪಸ್ ಪಡೆದಿದ್ದರಿಂದ ಬಿಜೆಪಿ- ಕಾಂಗ್ರೆಸ್ ನಡುವೆ ಹಣಾಹಣಿ ಏರ್ಪಟ್ಟಿತ್ತು.

ಕಾಂಗ್ರೆಸ್ ಅಭ್ಯರ್ಥಿ ಸೈಯದ್ ಹಸರತ್‌ಉಲ್ಲಾ 28 ಮತಗಳನ್ನು ಗಳಿಸಿದರು. ಬಿಜೆಪಿಯ ಶಿವಕುಮಾರ್ 47 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರು.

ಇಲ್ಲಿ ಸತತ ಎರಡನೇ ಬಾರಿಗೆ ಬಿಜೆಪಿಯು ಮೇಯರ್ ಗಾದಿ ಪಡೆದಿದೆ. ಕೊನೆ ಕ್ಷಣದಲ್ಲಿ ಮೈತ್ರಿ ಏರ್ಪಟ್ಟಿದ್ದು, ಜೆಡಿಎಸ್‌ ಈ ಬಾರಿಯೂ ಉಪ ಮೇಯರ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಹಿಂದಿನ ಲೇಖನ‘ಭಾರತ್ ಜೋಡೋ’ ಪಾದಯಾತ್ರೆ: ಸಿದ್ದರಾಮಯ್ಯ ನೇತೃತ್ವದಲ್ಲಿ ಪೂರ್ವ ಸಿದ್ದತಾ ಸಭೆ
ಮುಂದಿನ ಲೇಖನಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗ ರಚನೆ: ಮುಖ್ಯಮಂತ್ರಿ ಘೋಷಣೆ