ಮನೆ ರಾಜ್ಯ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಅಹೋರಾತ್ರಿ ಧರಣಿ: ಫ್ರೀಡಂ ಪಾರ್ಕ್‌ನಲ್ಲಿ ಸರ್ಕಾರದ ವಿರುದ್ಧ ಧರಣಿ

ಬೆಲೆ ಏರಿಕೆ ಖಂಡಿಸಿ ಬಿಜೆಪಿ ಅಹೋರಾತ್ರಿ ಧರಣಿ: ಫ್ರೀಡಂ ಪಾರ್ಕ್‌ನಲ್ಲಿ ಸರ್ಕಾರದ ವಿರುದ್ಧ ಧರಣಿ

0

ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಮೊಳಗಿದೆ. ಹಾಲು, ಮೊಸರು, ವಿದ್ಯುತ್, ಡೀಸೆಲ್ ದರ, ಕಸ ತೆರಿಗೆ ಹೀಗೆ ಒಂದರ ಹಿಂದೆ ಒಂದರಂತೆ ದರ ಏರಿಕೆಗೆ ರಾಜ್ಯಾದ್ಯಂತ ಜನ ಕಿಡಿಕಾರಿದ್ದಾರೆ. ಹಾಲು, ಮೊಸರಿನ ಬೆನ್ನಲ್ಲೇ ಡೀಸೆಲ್ ದರವೂ 2 ರೂಪಾಯಿ ಏರಿಕೆಯಾಗಿದ್ದು ಜನಾಕ್ರೋಶಕ್ಕೆ ಗುರಿಯಾಗಿದೆ. ಇದೇ ವಿಚಾರ ಮುಂದಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದೆ.

ಜನಾಕ್ರೋಶವನ್ನೇ ಅಸ್ತ್ರ ಮಾಡಿಕೊಂಡ ಬಿಜೆಪಿ ಹೋರಾಟಕ್ಕಿಳಿದೆ. ಫ್ರೀಡಂಪಾರ್ಕ್‌ನಲ್ಲಿ ಅರೋಹಾತ್ರಿ ಧರಣಿ ನಡೆಸಿದೆ. ಈ ಹೋರಾಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಇತರ ಮಾಜಿ ಸಿಎಂಗಳು, ಶಾಸಕರು, ಮಾಜಿ ಶಾಸಕರು, ಪರಿಷತ್ ಸದಸ್ಯರು ಹಾಜರಾಗಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಬಿಜೆಪಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ. ಹಾಲಿನ ದರ ವಿಚಾರದಲ್ಲಿ ರೈತರಿಗೆ ಸಹಾಯ ಮಾಡಬಾರದಾ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ರೈತರ ವಿರೋಧಿ ಎನ್ನಲು ಇದುವೇ ಸಾಕ್ಷಿ ಎಂದು ಅವರು ಕುಟುಕಿದ್ದಾರೆ.