ಮನೆ ಅಪರಾಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ: ಕಾರು ಜಖಂ

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ: ಕಾರು ಜಖಂ

0

ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಚಲಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಹಾನಿಯಾಗಿದೆ.

Join Our Whatsapp Group

ಇಂದು ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಅದೃಷ್ಟವಶಾತ್  ಅಪಘಾತದಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಅಪಘಾತದಲ್ಲಿ ಅದೃಷ್ಟವಶಾತ್  ಕಾರು ಚಾಲಕ ಸೇರಿದಂತೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಡ್ರೈವರ್ ವಿರುದ್ಧ ಕೇಸ್ ಮಾಡಿದ್ದಾರೆ.

ಪಕ್ಷದ ಕಡೆಯಿಂದ ನೀಡಲಾದ ಅಧಿಕೃತ ಕಾರು ಇದಾಗಿತ್ತು. ವಿಜಯೇಂದ್ರ ಅವರು ತಮ್ಮ ಪರ್ಸನಲ್ ಕಾರಿನಲ್ಲಿ ಇದ್ದರು. ಪಕ್ಷ ನೀಡಿದ್ದ ಕಾರಿನಲ್ಲಿ ವಿಜಯೇಂದ್ರ ಅವರ ಫೋಟೋಗ್ರಾಫರ್ ಮತ್ತು ಪಿಎ ಸಂಚರಿಸುತ್ತಿದ್ದರು. ಚಿಕ್ಕಮಗಳೂರಿನಿಂದ ಶಿಖಾರಿಪುರ ತೆರಳುವ ವೇಳೆ ಆಕ್ಸಿಡೆಂಟ್ ಆಗಿದೆ.