ಶಿವಮೊಗ್ಗ: ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗಲಿದೆ. 30 ವರ್ಷಗಳಿಂದ ರಾಜಕಾರಣದಲ್ಲಿದ್ದು, ಒಬಿಸಿ ಸಮುದಾಯಕ್ಕೆ ಆದ್ಯತೆ ನೀಡುವುದಾದರೆ ನನ್ನನ್ನು ಪರಿಗಣಿಸಿ ಎಂದಿದ್ದೇನೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ಸುದ್ದಿಗಾರರ ಜತೆ ಹೇಳಿದರು.
ಎಲ್ಲರನ್ನು ಜತೆಗೆ ಕರೆದುಕೊಂಡು ಹೋಗುವ ವ್ಯಕ್ತಿ ರಾಜ್ಯಾಧ್ಯಕ್ಷ ಆಗಬೇಕೆಂದು ವರಿಷ್ಠರಿಗೆ ತಿಳಿಸಿದ್ದೇವೆ. ಸ್ವಲ್ಪ ತಾಳ್ಮೆಯಿಂದ ಇರುವಂತೆ ವರಿಷ್ಠರು ತಿಳಿಸಿದ್ದಾರೆ. ಬೂತ್ ಮಟ್ಟದಿಂದ ಅಧ್ಯಕ್ಷರ ಬದಲಾವಣೆ ಆಗುತ್ತಿದೆ. ರಾಜ್ಯಮಟ್ಟದಲ್ಲಿ ಸಹ ಬದಲಾವಣೆ ಆಗುತ್ತದೆ. ಅವಕಾಶ ಸಿಕ್ಕಲ್ಲಿ ನಾನು ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸುತ್ತೇನೆ ಎಂದರು.