ಮನೆ ರಾಷ್ಟ್ರೀಯ ಗುಜರಾತ್’ನಲ್ಲಿ ಮುನ್ನಡೆ ಸಾಧಿಸಿದ ಬಿಜೆಪಿ

ಗುಜರಾತ್’ನಲ್ಲಿ ಮುನ್ನಡೆ ಸಾಧಿಸಿದ ಬಿಜೆಪಿ

0

ಗುಜರಾತ್‌, ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಮತ ಎಣಿಕೆ ಪ್ರಾರಂಭಗೊಂಡಿದ್ದು, ನಿರೀಕ್ಷೆಯಂತೆ ಗುಜರಾತಿನಲ್ಲಿ ಆಡಳಿತಾರೂಢ ಬಿಜೆಪಿ ಮುನ್ನಡೆ ಸಾಧಿಸಿದೆ.

ಪ್ರಾಥಮಿಕ ಸುತ್ತಿನ ಮತ ಎಣಿಕೆಯಲ್ಲಿ(9 ಗಂಟೆವರೆಗೆ) ಗುಜರಾತ್‌’ನ 182 ಸ್ಥಾನಗಳ ಪೈಕಿ ಬಿಜೆಪಿ 131 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್‌ 42 ರಲ್ಲಿ, ಆಮ್‌ ಆದ್ಮಿ 5 ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿವೆ.

ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದ್ದು, 68 ಕ್ಷೇತ್ರಗಳಲ್ಲಿ ಬಿಜೆಪಿ 31, ಕಾಂಗ್ರೆಸ್‌ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ಗುಜರಾತ್‌ ಸಿಎಂ ಭೂಪೇಂದ್ರ ಪಟೇಲ್‌, ಹಿಮಾಚಲ ಸಿಎಂ ಜೈರಾಂ ಠಾಕೂರ್‌ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಹಾರ್ದಿಕ್‌ ಪಟೇಲ್‌ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌’ನ ಜಿಗ್ನೇಶ್‌ ಮೇವಾನಿ ಹಿನ್ನಡೆ ಅನುಭವಿಸಿದ್ದಾರೆ.

ಬಿಜೆಪಿ ಅಲ್ಪೇಶ್‌ ಠಾಕೂರ್‌ ಮುನ್ನಡೆ ಸಾಧಿಸಿದ್ದಾರೆ. ಆಮ್‌ ಆದ್ಮಿಯ ಇಸುದಾನ್‌ ಗಾದ್ವಿ ಮುನ್ನಡೆಯಲ್ಲಿದ್ದಾರೆ.

ಹಿಮಾಚಲದಲ್ಲಿ ಕಾಂಗ್ರೆಸ್‌ ರೋಹಿತ್‌ ಠಾಕೂರ್‌ ಮುನ್ನಡೆ ಸಾಧಿಸಿದ್ದಾರೆ. ಉತ್ತರಪ್ರದೇಶದ ರಾಂಪುರ್ ಸದರ್ ಮತ್ತು ಖತೌಲಿ, ಒಡಿಶಾದ ಪದಂಪುರ, ರಾಜಸ್ಥಾನದ ಸರ್ದಾರ್ ಶಹರ್, ಬಿಹಾರದ ಕುರ್ಹಾನಿ ಮತ್ತು ಛತ್ತೀಸಗಢದ ಭಾನುಪ್ರತಾಪ್‌ಪುರ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭಗೊಂಡಿದೆ.

ಮೈನ್‌’ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಡುವೆ ತೀವ್ರ ಪೈಪೋಟಿ ಇದೆ.

ಹಿಂದಿನ ಲೇಖನಎಚ್’ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆರ್ಜಿ ಆಹ್ವಾನ
ಮುಂದಿನ ಲೇಖನಮಹಿಳಾ ಹಾಸ್ಟೆಲ್ ನಿರ್ಬಂಧಿಸುವ ಬದಲು ಪುರುಷರನ್ನು ಅಂಕೆಯಲ್ಲಿಡಿ, ತೊಂದರೆಯಾಗುತ್ತಿರುವುದು ಅವರಿಂದ: ಕೇರಳ ಹೈಕೋರ್ಟ್