ಮನೆ ರಾಜಕೀಯ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಸಿಗಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ದಕ್ಷಿಣ ಭಾರತದಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಸಿಗಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

0

ಹೊಸದಿಲ್ಲಿ: ದಕ್ಷಿಣ ಭಾರತದಲ್ಲಿ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ದೊಡ್ಡ ಗೆಲುವು ಸಿಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭವಿಷ್ಯ ನುಡಿದಿದ್ದಾರೆ.

Join Our Whatsapp Group

ನಾವು ದಕ್ಷಿಣದ ನಾಲ್ಕು ರಾಜ್ಯಗಳಾದ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡುಗಳಲ್ಲಿ ದೊಡ್ಡ ಗೆಲುವಿನತ್ತ ಸಾಗುತ್ತಿದ್ದೇವೆ ಎಂದು ಶಾ ಎನ್ ಡಿಟಿವಿ ಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

ಕರ್ನಾಟಕ ಹೊರತು ಪಡಿಸಿ ದಕ್ಷಿಣದ ಉಳಿದ ರಾಜ್ಯಗಳಲ್ಲಿ ಬಿಜೆಪಿ ಹೆಚ್ಚಿನ ಬಲ ಹೊಂದಿಲ್ಲ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ಖಾತೆಗಳು 109 ಸ್ಥಾನಗಳನ್ನು ಹೊಂದಿದ್ದು, ಕಳೆದ ಬಾರಿ ಬಿಜೆಪಿ 29 ಸ್ಥಾನಗಳನ್ನು ಗೆದ್ದಿದೆ. ಅದರಲ್ಲಿ ಕರ್ನಾಟಕದಲ್ಲಿಯೇ 25 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದ್ದರೆ, ತೆಲಂಗಾಣದಲ್ಲಿ ನಾಲ್ವರು ಗೆದ್ದಿದ್ದರು. ಆಂಧ್ರಪ್ರದೇಶ ಮತ್ತು ತಮಿಳುನಾಡು ಎರಡರಲ್ಲೂ ಬಿಜೆಪಿ ಯಾವುದೇ ಸ್ಥಾನವನ್ನು ಗೆಲ್ಲಲು ವಿಫಲವಾಗಿದೆ. 20 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಕೇರಳದಲ್ಲಿಯೂ ಪಕ್ಷ ಯಾವುದೇ ಸ್ಥಾನ ಗೆದ್ದಿಲ್ಲ.

ಅಮಿತ್ ಶಾ ಮತ್ತು ಪ್ರಧಾನಿ ಮೋದಿ ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿಯ ರ್ಯಾಲಿಗಳಲ್ಲಿ ಭಾಗವಹಿಸಿದ್ದಾರೆ. ಮೋದಿ ಅವರು ಈ ವರ್ಷ ಕೇರಳ ಮತ್ತು ತಮಿಳುನಾಡಿಗೆ ಹನ್ನೆರಡು ಬಾರಿ ಭೇಟಿ ನೀಡಿದ್ದಾರೆ. ಹಿರಿಯ ನಾಯಕರುಗಳನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ನಿಯೋಜಿಸಿದ್ದಾರೆ. ತಿಂಗಳ ಆರಂಭದಲ್ಲಿ ಕರ್ನಾಟಕದ ಹಾವೇರಿಯಲ್ಲಿ ಮಾತನಾಡಿದ್ದ ಶಾ, ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ನಾವು ಕಾಂಗ್ರೆಸ್‌ಗಿಂತ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ ಎಂದಿದ್ದರು.

ದಕ್ಷಿಣದಲ್ಲಿ ಈ ಬಾರಿ ನಮ್ಮ ಅತ್ಯುತ್ತಮ ಪ್ರದರ್ಶನವಾಗಿದೆ ಎಂದು ನಾನು ಭಾವಿಸುತ್ತೇನೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ರಾಜ್ಯಗಳಲ್ಲಿ ನಾವು ಉತ್ತಮ ಫಲಿತಾಂಶವನ್ನು ಪಡೆಯುತ್ತೇವೆ. ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ, ಪ್ರಧಾನಿ ಮೋದಿ ಅವರ ಜನಪ್ರಿಯತೆ ಬೆಳೆದಿದೆ ಇದರಿಂದ ನಾವು ಮತ ಮತ್ತು ಸ್ಥಾನಗಳನ್ನು ಪಡೆಯಬಹುದು ಎಂದಿದ್ದರು.