ಧಾರವಾಡ: ಕರ್ನಾಟಕದಲ್ಲಿ ಮುಸ್ಲಿಂ ಮೀಸಲಾತಿ ಮರಳಲು ಬಿಜೆಪಿ ಬಿಡುವುದಿಲ್ಲ ಎಂದು ನಾನು ಜನರಿಗೆ ಭರವಸೆ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.
ಧಾರವಾಡದಲ್ಲಿ ಶುಕ್ರವಾರ ನಡೆದ ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ, ಸಂವಿಧಾನದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿಗೆ ಯಾವುದೇ ಅವಕಾಶವಿಲ್ಲ, ಆದರೆ ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ, ಕಾಂಗ್ರೆಸ್ ಮುಸ್ಲಿಂ ಮೀಸಲಾತಿಯನ್ನು ಮರಳಿ ತರುವುದಾಗಿ ಹೇಳಿಕೊಂಡಿದೆ. ನಾನು ಕಾಂಗ್ರೆಸ್ ನಾಯಕರಿಗೆ ಒಂದು ಪ್ರಶ್ನೆಯನ್ನು ಕೇಳಲು ಬಯಸುತ್ತೇನೆ, ಮುಸ್ಲಿಮರಿಗೆ ಮೀಸಲಾತಿ ನೀಡಲು ನೀವು ಯಾರ ಕೋಟಾವನ್ನು ಕಡಿತಗೊಳಿಸುತ್ತೀರಿ? ಲಿಂಗಾಯತರು, ಒಕ್ಕಲಿಗರು ಅಥವಾ ಎಸ್ಸಿ, ಎಸ್ಟಿಗಳು. ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಶಾ ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೆಚ್ಚಿನ ಸಮುದಾಯಗಳನ್ನು ಸೇರಿಸಲು ಒಟ್ಟಾರೆ ಮೀಸಲಾತಿ ಮಿತಿಯನ್ನು ಶೇಕಡಾ 50 ರಿಂದ 75 ಕ್ಕೆ ಏರಿಸುವುದಾಗಿ ಇತ್ತೀಚೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದರು.
ಮೋದಿ ವಿದೇಶ ಪ್ರವಾಸಕ್ಕೆ ಹೋದಾಗಲೆಲ್ಲಾ ಜನರು ಮೋದಿ, ಮೋದಿ ಎಂದು ಜಪಿಸುತ್ತಾರೆ, ಆದರೆ, ಇಲ್ಲಿ ಖರ್ಗೆ ಅವರನ್ನು ‘ವಿಷಪೂರಿತ ಹಾವು’ ಎಂದು ಕರೆದಿದ್ದಾರೆ. ಮೋದಿಯವರನ್ನು ದೂಷಿಸಿದಷ್ಟೂ ಕಮಲ ಅರಳುತ್ತದೆ ಎಂದು ಅಮಿತ್ ಶಾ ಹೇಳಿದರು.














