ಬೆಂಗಳೂರು: ಏನೇ ಸರ್ಕಸ್ ಮಾಡಿದರೂ ಬಿಜೆಪಿ 60 ಸೀಟ್ ಮೇಲೆ ಹೋಗಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಭವಿಷ್ಯ ನುಡಿದರು.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯ ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆ. ಹೀಗಾಗಿ ಸಂಸದೆ ಸುಮಲತಾ ಅಂಬರೀಶ್ ನಿರ್ಧಾರಕ್ಕೆ ಹೆಚ್ಚಿನ ಮನ್ನಣೆ ನೀಡಬೇಕಿಲ್ಲ ಎಂದು ನುಡಿದರು.
ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ಕುರಿತು ಮಾತನಾಡಿದ ಅವರು, ಕಳೆದ ಬಾರಿ ಅಂಬರೀಶ್ ಧರ್ಮಪತ್ನಿ ಎಂಬ ಅನುಕಂಪ ಇತ್ತು. ಆದರೆ ಮಂಡ್ಯ ಜಿಲ್ಲೆ ಜನರು ಪ್ರಬುದ್ಧರು. ಮಂಡ್ಯ ಜಿಲ್ಲೆಯ ಜನರ ತೀರ್ಮಾನ ಅಂತಿಮವಾಗಿರುತ್ತದೆ. ಬಿಜೆಪಿಯವರು ತ್ರಿಕೋನ ಸ್ಪರ್ಧೆಯಾಗುತ್ತದೆ ಎಂದು ಕಾಯುತ್ತಿದ್ದಾರೆ ಎಂದು ಬಿಕೆ ಹರಿಪ್ರಸಾದ್ ಟೀಕಿಸಿದರು.