ಮನೆ ರಾಜ್ಯ ಮೈತ್ರಿ ವಿಚಾರದಲ್ಲಿ ಜೆಡಿಎಸ್​​ ಗೆ ಸಮಾಧಾನ ಆಗುವ ತೀರ್ಮಾನವನ್ನು ಬಿಜೆಪಿ ಮಾಡಲಿದೆ: ಬಿ ವೈ ವಿಜಯೇಂದ್ರ...

ಮೈತ್ರಿ ವಿಚಾರದಲ್ಲಿ ಜೆಡಿಎಸ್​​ ಗೆ ಸಮಾಧಾನ ಆಗುವ ತೀರ್ಮಾನವನ್ನು ಬಿಜೆಪಿ ಮಾಡಲಿದೆ: ಬಿ ವೈ ವಿಜಯೇಂದ್ರ  

0

ಬೆಂಗಳೂರು: ಲೋಕಸಭೆ ಚುನಾವಣೆಗೆ ಮೈತ್ರಿ ವಿಚಾರದಲ್ಲಿ ಜೆಡಿಎಸ್​​ ಗೆ ಸಮಾಧಾನ ಆಗುವಂಥ ತೀರ್ಮಾನವನ್ನು ಬಿಜೆಪಿ ಹೈಕಮಾಂಡ್ ಮಾಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ  ಹೇಳಿದರು.

ಜೆಡಿಎಸ್ ಅಸಮಾಧಾನ ಹಾಗೂ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಬಂಡಾಯದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಈಗಿನ ಅಸಮಾಧಾನದ ಬಗ್ಗೆ ನಾವು ನೀವು ಮಾತಾಡುವುದು ತಪ್ಪು. ಯಾವ ಸಂದರ್ಭದಲ್ಲಿ ಏನು ನಿರ್ಧಾರ ತೆಗೆದುಕೊಳ್ಳಬೇಕು ಎಂಬುದನ್ನು ಜೆಡಿಎಸ್ ಮತ್ತು ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

ಈಗಿನ ಗೊಂದಲಗಳೆಲ್ಲವೂ ಸುಖಾಂತ್ಯ ಕಾಣಲಿದೆ ಎಂದ ವಿಜಯೇಂದ್ರ, ಮಾಜಿ ಸಿಎಂ ಡಿವಿ ಸದಾನಂದ ಗೌಡ ಬಗ್ಗೆ ಸಚಿವ ಎಂಬಿ ಪಾಟೀಲ್ ಹೇಳಿಕೆ ಬಗ್ಗೆಯೂ ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ನಾಯಕರಿಗೆ ಅವರ ನಾಯಕರಿಗಿಂತ ನಮ್ಮ ಪಕ್ಷದ ನಾಯಕರ ಮೇಲೆಯೇ ಪ್ರೀತಿ ಹೆಚ್ಚಾಗಿದೆ. ಕಳೆದೊಂದು ವಾರದ ಎಂಬಿ ಪಾಟೀಲ್ ಹಾಗೂ ಇತರ ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಗಮನಿಸಿದರೆ ಬಿಜೆಪಿ ನಾಯಕರ ಮೇಲೆ ಅವರಿಗೆ ವಿಶ್ವಾಸ ಬಂದಂತಿದೆ. ಸದಾನಂದ ಗೌಡ ಪಕ್ಷ ಬಿಡಲ್ಲ, ಬಿಜೆಪಿಯಲ್ಲೇ ಇರುತ್ತಾರೆ ಎಂದು ವಿಜಯೇಂದ್ರ ಹೇಳಿದರು.

ಶಿವಮೊಗ್ಗದಲ್ಲಿ ಕೆಎಸ್ ಈಶ್ವರಪ್ಪ ಬಂಡಾಯದ ಬಗ್ಗೆ ಪ್ರತಿಕ್ರಿಯಿಸಿ, ಅವರ ಮನವೊಲಿಕೆ ಪ್ರಯತ್ನ ಕೈಬಿಡಲ್ಲ. ಅವರು ಹಿರಿಯರು, ಕೆಲವು ತಪ್ಪು ಮಾಹಿತಿಗಳು ಅವರಿಗೆ ತಲುಪಿದೆ. ಅವರಿಗೆ ಸತ್ಯ ಅರ್ಥ ಆದ ಮೇಲೆ ಎಲ್ಲವೂ ಸರಿಯಾಗಲಿದೆ. ಇವತ್ತು, ನಾಳೆ ದೆಹಲಿಯಲ್ಲಿ ಸಭೆ ಇದೆ. ಬಾಕಿ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮವಾಗಲಿದೆ ಎಂದರು.

ಹಿಂದಿನ ಲೇಖನಚುನಾವಣಾ ಬಾಂಡ್ ರಾಜಕೀಯ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುತ್ತದೆ: ಪ್ರಕಾಶ್ ರಾಜ್
ಮುಂದಿನ ಲೇಖನನಗರ್ತಪೇಟೆ ಗಲಾಟೆ ಪ್ರಕರಣ: ಶೋಭಾ ಕರಂದ್ಲಾಜೆ ಸೇರಿದಂತೆ ಹಲವರ ಬಂಧನ