ಕೋಲ್ಕತ್ತಾ ಪಶ್ಚಿಮ ಬಂಗಾಳದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಕಮಲ ಅರಳಿದೆ. ಈಗಿನ ಟ್ರೆಂಡ್ ಪ್ರಕಾರ ಬಿಜೆಪಿ 171ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬೇಕಿರುವುದು 148 ಸ್ಥಾನಗಳು. ಇದರೊಂದಿಗೆ ಕೇಸರಿ ಪಕ್ಷ ರಾಜ್ಯದಲ್ಲಿ ಅಧಿಕಾರದ ಗದ್ದುಗೆಗೇರುವ ಉತ್ಸಾಹದಲ್ಲಿದ್ದು ಬಿಜೆಪಿ ಭಾರೀ ಮುನ್ನಡೆ ಸಾಧಿಸುತ್ತಿದ್ದಂತೆ ಕೋಲ್ಕತ್ತಾದಲ್ಲಿರುವ ಪಕ್ಷದ ರಾಜ್ಯ ಪ್ರಧಾನ ಕಚೇರಿಯ ಹೊರಗೆ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.
ಈ ಸಂಭ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋಗಳನ್ನು ಹಿಡಿದುಕೊಂಡು ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತಿದ್ದಾರೆ. ಅಮಿತ್ ಶಾ ಮತ್ತು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ಗುಣಗಾನ ಮಾಡುತ್ತಿದ್ದಾರೆ. ಸಿಹಿತಿಂಡಿ ಹಂಚಿ ಸಂಭ್ರಮಿಸುತ್ತಿದ್ದ ದೃಶ್ಯಗಳು ಕಂಡುಬಂದಿದೆ.













