ಮನೆ ರಾಜ್ಯ ಕೊಡಗಿನಲ್ಲಿ  ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು

ಕೊಡಗಿನಲ್ಲಿ  ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು

0

ಕೊಡಗು(Kodagu): ಪ್ರವಾಹ ಪರಿಸ್ಥಿತಿ ಅವಲೋಕಿಸಲು ಜಿಲ್ಲೆಯ ಪ್ರವಾಸ ಕೈಗೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯಗೆ  ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ, ಪ್ರತಿಭಟನೆ ನಡೆಸಿದ್ದಾರೆ.

ಸಿದ್ಧರಾಮಯ್ಯ ಅವರ ಕೊಡಗು ಜಿಲ್ಲಾ ಭೇಟಿ ವಿರೋಧಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು  ಪ್ರತಿಭಟನೆ ನಡೆಸಿದ್ದು, ವಿರಾಜಪೇಟೆ ತಾಲ್ಲೂಕಿನ ತಿತಿಮತಿಯಲ್ಲಿ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

ಸಿದ್ಧರಾಮಯ್ಯ ಟಿಪ್ಪು ಸುಲ್ತಾನ್ ಶಿಷ್ಯ, ಸಿದ್ಧರಾಮಯ್ಯ ಗೋಬ್ಯಾಕ್ ಎಂದು ಘೋಷಣೆ ಕೂಗಿ ಕಾರಿಗೆ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ಎಸೆದು ಕಿಡಿಕಾರಿದ್ದಾರೆ.

ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ  ನಡುವೆ ವಾಗ್ವಾದ ನಡೆದಿದೆ.

ಹಿಂದಿನ ಲೇಖನಬಿಎಸ್’ವೈ  ಪಕ್ಷಕ್ಕೆ ದೊಡ್ಡಮಟ್ಟದ ಶಕ್ತಿ: ಅರುಣ್ ಸಿಂಗ್
ಮುಂದಿನ ಲೇಖನಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಬಿಎಸ್’ವೈಗೆ ಸ್ಥಾನಮಾನ: ಎಂ.ಬಿ.ಪಾಟೀಲ್