ಮೈಸೂರು(Mysuru): ಸುಳ್ಯದ ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ನಗರದ ಗಾಂಧಿ ಚೌಕದಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.
ಸ್ವಪಕ್ಷದ ಸರ್ಕಾರದ ವಿರುದ್ಧವೇ ಬೀದಿಗಿಳಿದಿರುವ ಬಿಜಪಿ ಮುಖಂಡರು ಹಾಗೂ ಕಾರ್ಯಕರ್ತರು, ಪ್ರವೀಣ್ ನೆಟ್ಟಾರು ಶ್ರದ್ಧಾಂಜಲಿ ಫಲಕ ಹಿಡಿದು ಪ್ರತಿಭಟನಡೆಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, ಹಲ್ಲೆ, ಹತ್ಯೆ ಮಾಡಿ ನಮ್ಮ ಧ್ವನಿ ಅಡಗಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಇನ್ನಷ್ಟು ಚುರುಕಾಗಬೇಕು. ಹತ್ಯೆಗೂ ಮುನ್ನವೇ ಹಿಂದೂ ಕಾರ್ಯಕರ್ತರ ರಕ್ಷಣೆ ಮಾಡಬೇಕು. ಸಮಾಜ ದ್ರೋಹಿಗಳ ವಿರುದ್ಧ ಗಡಿಯಲ್ಲಿ ಕಟ್ಟೆಚ್ಚರವಹಿಸಬೇಕು. ನಮ್ಮದೇ ಮುಖ್ಯಮಂತ್ರಿ, ಗೃಹಮಂತ್ರಿ, ದಕ್ಷ ಪೊಲೀಸ್ ಅಧಿಕಾರಿಗಳಿಗೆ ಸ್ವಾತಂತ್ರ್ಯ ಕೊಡಬೇಕು. ನಮ್ಮ ಕಾರ್ಯಕರ್ತರು ರಾಜೀನಾಮೆ ನೀಡುವ ಮೂಲಕ ಅವರ ನೋವನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್, ವಿಭಾಗೀಯ ಪ್ರಭಾರಿ ಮೈ.ವಿ.ರವಿಶಂಕರ್, ಮೇಯರ್ ಸುನಂದಾ ಪಾಲನೇತ್ರ, ಮುಖಂಡರಾದ ಶಿವಕುಮಾರ್, ಸಂದೇಶ್ ಸ್ವಾಮಿ, ಗಿರಿಧರ್ ಸೇರಿದಂತೆ ಹಲವು ಭಾಗಿಯಾಗಿದ್ದರು.