ಮನೆ ರಾಜಕೀಯ ಹಾಸನ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಗೆ ಒತ್ತು: ಸಚಿವ ಕೆ.ಗೋಪಾಲಯ್ಯ

ಹಾಸನ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಗೆ ಒತ್ತು: ಸಚಿವ ಕೆ.ಗೋಪಾಲಯ್ಯ

0

ಹಾಸನ; ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗಿದೆ. ಎಲ್ಲ ತಾಲ್ಲೂಕುಗಳಲ್ಲೂ ಈ ಕಾರ್ಯಕ್ರಮ ಮಾಡಬೇಕೆಂದು ಪ್ರಧಾನಮಂತ್ರಿಗಳು ಕರೆ ನೀಡಿದ್ದು. ಅದರಂತೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಬಿಜೆಪಿ ಸಂಸ್ಥಾಪನಾ ದಿನಾಚರಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ಯಾಮ ಪ್ರಕಾಶ್ ಮುಖರ್ಜಿ, ದೀನ್ ದಯಾಳ್ ಉಪಾಧ್ಯಾಯ ಅವರು ಹಾಕಿಕೊಟ್ಟ ದಾರಿಯಲ್ಲಿ ಇಂದು ಪಕ್ಷ ಸಂಘಟನೆಯಾಗಿ ದೇಶದ ಅಧಿಕಾರ ಹಿಡಿದಿರುವುದು ಶ್ಲಾಘನೀಯ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಜನಪರವಾದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ  ಮಾಡಲಾಗುವುದು ಎಂದರು.

ಯಾರು ಎಲ್ಲಿ ಬೇಕಾದರೂ ವ್ಯಾಪಾರ ಮಾಡಬಹುದು, ಇಂತಹುದೇ ಕಡೆ  ವ್ಯಾಪಾರ ಮಾಡಿ ಎಂದು ಸರ್ಕಾರ ಯಾರಿಗೂ ಹೇಳಿಲ್ಲ. ಹೇಳುವುದು ಇಲ್ಲ. ಉತ್ತಮವಾದ ವಸ್ತು ಮತ್ತು ಉತ್ತಮ ದರ ಸಿಕ್ಕರೆ ಯಾರು ಎಲ್ಲಿ ಬೇಕಾದರೂ ವ್ಯಾಪಾರ ಮಾಡಬಹುದು. ಸರ್ಕಾರ ಇಂಥವರ ಬಳಿಯೇ ವ್ಯಾಪಾರ ಮಾಡಿ ಎಂದು ಎಲ್ಲೂ ಹೇಳಿಲ್ಲ. ಇದು ಜನರ ವೈಯಕ್ತಿಕ ವಿಚಾರ ಎಂದು ಸುದ್ದಿಗಾರರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಇದಕ್ಕೂ ಮುನ್ನ ಬಿಜೆಪಿ ಪಕ್ಷದ  ಸಂಸ್ಥಾಪನಾ ದಿನದ ಅಂಗವಾಗಿ  ಹಮ್ಮಿಕೊಂಡಿದ್ದ ಶೋಭಾ ಯಾತ್ರೆಯಲ್ಲಿ  ಸಚಿವ ಕೆ‌.ಗೋಪಾಲಯ್ಯ ಭಾಗವಹಿಸಿದ್ದರು. ನಂತರ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ  ನರೇಂದ್ರ ಮೋದಿಯವರ ಭಾಷಣವನ್ನು ವರ್ಚುವಲ್‌ ವೀಕ್ಷಿಸಿದರು.

ಹಿಂದಿನ ಲೇಖನನಿರೀಕ್ಷಣಾ ಜಾಮೀನು ಕೋರಿ ಹಲವು ಕೋರ್ಟ್ ಗಳಲ್ಲಿ ಅರ್ಜಿ ಸಲ್ಲಿಕೆ ತಡೆಗೆ ಹೈಕೋರ್ಟ್ ಮಾರ್ಗಸೂಚಿ
ಮುಂದಿನ ಲೇಖನಚಂದ್ರು ಕೊಲೆ ಪ್ರಕರಣ: ಬೈಕ್ ತಾಗಿದ್ದಕ್ಕೆ ಕೊಲೆ ಮಾಡಿರುವ ಮಾಹಿತಿ