ಮಂಡ್ಯ: ಮಂಡ್ಯದಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಪರ ಹಾಗೂ ವಿರುದ್ಧ ಪ್ರತಿಭಟನೆ ನಡೆದಿದೆ.
ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಸಂಜಯ್ ವೃತ್ತದಲ್ಲಿ ‘ಪೇಸಿಎಸ್’ ಎಂಬ ಫೋಸ್ಟರ್ ಅಂಟಿಸಿ ಅಭಿಯಾನ ಮಾಡಿ ಆಕ್ರೋಶ ಹೊರ ಹಾಕಿದ್ದು, ಮತ್ತೊಂದೆಡೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪರ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.
ಬಿಜೆಪಿ ಕಾರ್ಯಕರ್ತರು ಸಂಜಯ್ ವೃತ್ತದಲ್ಲಿ ‘ಪೇಸಿಎಸ್’ ಎಂಬ ಫೋಸ್ಟರ್ ಅಂಟಿಸಿ ಅಭಿಯಾನ ಮಾಡಿದರು.
‘ಸ್ಕ್ಯಾನ್ ಮಾಡಿ ನೋಡಿ, ಚೆಲುವ ಚನ್ನಿಗರಾಯನ ಭ್ರಷ್ಟಾಚಾರ ಬರಬಹುದು’ ಎನ್ನುವ ಶೀರ್ಷಿಕೆಯಡಿ ವ್ಯಂಗ್ಯ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ವಶಕ್ಕೆ ಪಡೆದರು.
ಇನ್ನು ಮತ್ತೊಂದೆಡೆ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯಿಂದ ಮಿನಿ ವಿಧಾನಸೌಧವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು.
ಸಚಿವ ಎನ್.ಚಲುವರಾಯಸ್ವಾಮಿ ಏಳಿಗೆ ಸಹಿಸದೆ ಷಡ್ಯಂತ್ರ ಮಾಡ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಶಾಸಕ ಸುರೇಶ್ಗೌಡ ವಿರುದ್ಧ ಆಕ್ರೋಶ ಹೊರ ಹಾಕಿದರು.