ಮೈಸೂರು (Mysuru): ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು.
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕುಕ್ಕರಳ್ಳಿ ಸರ್ಕಾರಿ ಶಾಲೆಯಲ್ಲಿ ಮತದಾನ ಮಾಡಿ ಶ್ರೀನಿವಾಸ್ ಪ್ರಸಾದ್ ಅವರು ಮಾತನಾಡಿದರು.
ಯಾವುದೇ ರೀತಿಯ ಗೊಂದಲ ಇಲ್ಲದೆ ಶಾಂತಿಯುತ ಮತದಾನ ನಡೆಯುತ್ತಿದೆ. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದರು. ಈ ಬಾರಿ ಬಿಜೆಪಿ ಹೆಚ್ಚು ಕೆಲಸ ಮಾಡಿದೆ. ಅತಿಹೆಚ್ಚು ನೋಂದಣಿ ಕಾರ್ಯ ಮಾಡಿದೆ. ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಲಸ ಮಾಡ್ತಿದ್ದಾರೆ. ಹಾಸನದಲ್ಲಿ ಜೆಡಿಎಸ್ ಪ್ರಾಬಲ್ಯ ಕೂಡಾ ಇದೆ.
ಆದರೆ ಮೈಸೂರು ಮತ್ತು ಚಾಮರಾಜನಗರ ಭಾಗದಲ್ಲಿ ಬಿಜೆಪಿಗೆ ಉತ್ತಮ ವಾತಾವರಣ ಇದೆ. ಹಾಗಾಗಿ ಬಿಜೆಪಿ ಹೆಚ್ಚು ಅಂತರದಲ್ಲಿ ಗೆಲ್ಲಲಿದೆ ಎಂದರು.
ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಪ್ರತಿಯಿಕ್ರಿಸಿದ ಅವರು, ಇ.ಡಿ ಸಂಸ್ಥೆ ತನ್ನ ಕರ್ತವ್ಯ ನಿರ್ವಹಸುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟಿಸುವುದು ಹಕ್ಕಿದೆ. ಆದರೆ ರಾಜಕೀಯ ಪ್ರೇರಿತ ಪ್ರತಿಭಟನೆ ಸರಿಯಲ್ಲ ಎಂದರು.
ಕಾನೂನು ಚೌಕಟ್ಟಿನಲ್ಲಿ ಇ.ಡಿ ಸಂಸ್ಥೆ ತನ್ನ ಕರ್ತವ್ಯ ಮಾಡ್ತಿದೆ.
ಕಾಂಗ್ರೆಸ್ ನವರು ಅದಕ್ಕೆ ರಾಜಕೀಯ ಬಣ್ಣ ಕಟ್ಟುತ್ತಿದ್ದಾರೆ. ಈ ಬಗ್ಗೆ ಅಂತಿಮವಾಗಿ ನ್ಯಾಯಾಲಯ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.