ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಐದು ಜನರು ಗಾಯಗೊಂಡಿದ್ದಾರೆ.
ಗ್ರೀನ್ ಅವೆನ್ಯೂ ರಸ್ತೆಯಲ್ಲಿರುವ ಕೆಫೆಯ ಬ್ರೂಕ್ ಫೀಲ್ಡ್ ಶಾಖೆಯಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಘಟನೆಯಲ್ಲಿ ಗಾಯಗೊಂಡವರ ಪೈಕಿ ಮೂವರು ಕೆಫೆ ಸಿಬ್ಬಂದಿಗಳು ಎಂದು ವರದಿಯಾಗಿದೆ.
ಸ್ಫೋಟದ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.