Saval TV on YouTube
ಪಟ್ನಾ: ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ಸಂಭವಿಸಿದ ಇಟ್ಟಿಗೆ ಕಾರ್ಖಾನೆ ಸ್ಫೋಟದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು, ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆಯಲು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್’ಡಿಆರ್’ಎಫ್) ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಇಟ್ಟಿಗೆ ಗೂಡಿನ ಚಿಮಣಿಯಲ್ಲಿ ಕಾಣಿಸಿಕೊಂಡ ಬೆಂಕಿಯೇ ಸ್ಫೋಟಕ್ಕೆ ಕಾರಣ ಎನ್ನಲಾಗಿದೆ.
ಮೋತಿಹಾರಿ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50 ಸಾವಿರ ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿಯವರ ಕಾರ್ಯಾಲಯ ಟ್ವೀಟ್ ಮಾಡಿದೆ.
ಮೋತಿಹಾರಿ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ.