ತುಮಕೂರು(Tumkur): ಪಾವಗಡ ತಾಲ್ಲೂಕು ಗಡಿ ಭಾಗವಾದ ವೈಎನ್ ಹೊಸಕೋಟೆ ಸಮೀಪದ ಬೂದಿಬೆಟ್ಟ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ರಾತ್ರಿ ಸ್ಫೋಟ ಸಂಭವಿಸಿದೆ.
ಕಚೇರಿಯ ಹಿಂಭಾಗದ ಕಿಟಕಿಯನ್ನು ಕಿತ್ತು ಒಳ ನುಗ್ಗಿರುವ ದುಷ್ಕರ್ಮಿಗಳು ಸಭಾಂಗಣದ ಮೂಲೆಯಲ್ಲಿ ಇರಿಸಿರುವ ದಾಖಲೆಗಳ ಅಲೆಮಾರಿಗೆ ಹೊಂದಿಕೊಂಡಂತೆ ಇರುವ ಕುರ್ಚಿಯ ಮೇಲೆ ಸ್ಫೋಟಕ ಇಟ್ಟಿರುವುದು ತಿಳಿದುಬಂದಿದೆ. ಸ್ಫೋಟದಿಂದ ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ. ಕುರ್ಚಿಗಳು ಸುಟ್ಟು ಹೋಗಿವೆ.
ರಾತ್ರಿ ಇದ್ದಕ್ಕಿದ್ದಂತೆ ಭಾರಿ ಸದ್ದು ಕೇಳಿ ಬಂದ ಕಾರಣ ಗಾಬರಿಗೊಂಡ ಜನರು ಹೋಗಿ ನೋಡಿದಾಗ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿದ್ದ ದೃಶ್ಯ ಕಂಡು ಬಂದಿದೆ.
ಜಿಲೆಟಿನ್ ಪೌಡರ್ ಬಳಸಿ ಈ ಕೃತ್ಯ ಮಾಡಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ತನಿಖೆಯಿಂದ ಸತ್ಯ ಹೊರಬೀಳಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.