ಮನೆ ರಾಷ್ಟ್ರೀಯ ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಭೇಟಿ ನಡುವೆ ರ್ಯಾಲಿ ಸ್ಥಳದಿಂದ 12 ಕಿಮೀ ದೂರದಲ್ಲಿ ಸ್ಫೋಟ

ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಭೇಟಿ ನಡುವೆ ರ್ಯಾಲಿ ಸ್ಥಳದಿಂದ 12 ಕಿಮೀ ದೂರದಲ್ಲಿ ಸ್ಫೋಟ

0

ನವದೆಹಲಿ (New Delhi)- ಪ್ರಧಾನಮಂತ್ರಿ (Prime Minister) ನರೇಂದ್ರ ಮೋದಿ (Narendra Modi) ಅವರು ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದು, ಈ ನಡುವೆ ಜಮ್ಮುವಿನಲ್ಲಿ ಸ್ಫೋಟವೊಂದು ಸಂಭವಿಸಿದೆ. ಇದರಿಂದ ಆತಂಕ ಹೆಚ್ಚಾಗಿದೆ.

ಮೋದಿಯವರು ಪಾಲ್ಗೊಳ್ಳಬೇಕಿದ್ದ ರ್ಯಾಲಿ ಸ್ಥಳದಿಂದ 12 ಕಿಮೀ ದೂರದ ಜಮ್ಮುವಿನ ಬಿಷ್ನಾಹ್‌ನ ಲಾಲಿಯನ್‌ ಗ್ರಾಮದ ಬಯಲು ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ.

ಸ್ಫೋಟ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಹಾಗೂ ಭದ್ರತಾ ಪಡೆಗಳು ಧಾವಿಸಿದ್ದು, ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೇಂದ್ರಾಡಳಿತ ಪ್ರದೇಶದ ಎರಡು ಪ್ರದೇಶಗಳ ನಡುವೆ ಸರ್ವಋತು ಸಂಪರ್ಕವನ್ನು ಸ್ಥಾಪಿಸಲು ಬನಿಹಾಲ್-ಖಾಜಿಗುಂಡ್ ರಸ್ತೆ ಸುರಂಗ ಮಾರ್ಗವನ್ನು ತೆರೆಯುವುದು ಸೇರಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ 20,000 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ನೆರವೇರಿಸಲಿದ್ದಾರೆ. ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಭಾಗವಹಿಸಲು ಮತ್ತು ದೇಶಾದ್ಯಂತ ‘ಗ್ರಾಮ ಸಭೆ’ಗಳನ್ನು ಉದ್ದೇಶಿಸಿ ಮಾತನಾಡಲು ಮೋದಿ ಕಾಶ್ಮೀರಕ್ಕೆ ಪ್ರಯಾಣಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿಗಳ ಕಚೇರಿ (ಪಿಎಂಒ) ಹೇಳಿಕೆಯಲ್ಲಿ ತಿಳಿಸಿದೆ.

ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯಿತಿಗೂ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ದೇಶದ ಪ್ರತಿ ಜಿಲ್ಲೆಯಲ್ಲಿ 75 ಜಲಮೂಲಗಳನ್ನು ಅಭಿವೃದ್ಧಿಪಡಿಸಲು ಮತ್ತು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿರುವ ಪ್ರಧಾನಿಯವರು ‘ಅಮೃತ ಸರೋವರ’ ಎಂಬ ಹೊಸ ಉಪಕ್ರಮವನ್ನು ಪ್ರಾರಂಭಿಸಲಿದ್ದಾರೆ ಎಂದು ಅದು ತಿಳಿಸಿದೆ.

ನಂತರ ಮುಂಬೈನಲ್ಲಿ ನಡೆಯಲಿರುವ ಮಾಸ್ಟರ್ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೋದಿ ಅವರು ಮೊದಲ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಅನುಕರಣೀಯ ಕೊಡುಗೆ ನೀಡಿದ ವ್ಯಕ್ತಿಗೆ ಪ್ರತಿ ವರ್ಷ ನೀಡಲಾಗುವುದು ಎಂದು ಹೇಳಿದೆ.