ಚಿಕ್ಕಮಗಳೂರು: ಬಿಜೆಪಿ ಸರ್ಕಾರದ ಯೋಜನೆಗಳಿಗೆ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿರುವುದು ಸರಿಯಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರ ಅವಧಿಯ ಹಗರಣ ಬಗ್ಗೆ ತನಿಖೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸರ್ಕಾರಕ್ಕೆ ತನಿಖೆ ನಡೆಸುವ ಪರಮಾಧಿಕಾರ ಇದೆ. ಅಭಿವೃದ್ಧಿ ಯೋಜನೆಯಲ್ಲಿ ಅವ್ಯವಹಾರವಾಗಿದ್ದರೆ ತನಿಖೆ ಮಾಡಿಸಲಿ. ಅಭಿವೃದ್ಧಿ ಕಾರ್ಯಕ್ಕೆ ಕಾಂಗ್ರೆಸ್ ಸರ್ಕಾರ ಅನುದಾನ ತಡೆಹಿಡಿದಿದೆ. ಅಭಿವೃದ್ಧಿ ಯೋಜನೆಗಳಿಗೆ ತಡೆ ಹಿಡಿದಿರುವುದು ಸರಿಯಲ್ಲ. ಬಿಜೆಪಿ ಸರ್ಕಾರದ ಯೋಜನೆಗಳಿಗೆ ತಡೆ ಹಿಡಿದಿರುವುದು ಸರಿಯಲ್ಲ. ಜನ ಮತ ಹಾಕಿ ಕೆಟ್ಟೆವು, ಮೋಸ ಹೋದೆವು ಎಂದು ಮಾತನಾಡುತ್ತಾರೆ ಎಂದು ಕಿಡಿಕಾರಿದರು.
ಇನ್ನು ವಿಪಕ್ಷ ನಾಯಕರ ಆಯ್ಕೆ ಕುರಿತು ಪ್ರತಿಕ್ರಿಯಿಸಿದ ಸಿ.ಟಿ ರವಿ, ಆದಷ್ಟು ಬೇಗ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಲಾಗುತ್ತದೆ. ಶಾಸಕಾಂಗ ಸಭೆಯಲ್ಲಿ ವಿಪಕ್ಷ ನಾಯಕರ ಬಗ್ಗೆ ನಿರ್ಧಾರ ಆಗಲಿದೆ ಎಂದರು.
Saval TV on YouTube