ಬೆಂಗಳೂರು: ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗೃಹಿಣಿ ಮೃತಪಟ್ಟ ಘಟನೆ ಲ್ಕ್ ಬೋರ್ಡ್ ಜಂಕ್ಷನ್ ಬಳಿಯ ಮಡಿವಾಳ ಫ್ಲೈಓವರ್ ಮೇಲೆ ನಿನ್ನೆ ಸಂಜೆ ನಡೆದಿದೆ.
ಸೀಮಾ(21) ಮೃತ ಗೃಹಿಣಿ.
BMTC ಬಸ್ ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಅಪಘಾತದ ಬಳಿಕ ಬಸ್ ಬಿಟ್ಟು ಚಾಲಕ ಮತ್ತು ನಿರ್ವಾಹಕ ಪರಾರಿಯಾಗಿದ್ದಾರೆ.
ಕಳೆದ ಎರಡೂವರೆ ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿ ಸಿಂಗಸಂಧ್ರದಲ್ಲಿ ವಾಸವಾಗಿದ್ದರು. ನಿನ್ನೆ ಸಂಜೆ ಪ್ರೋ ಕಬಡಿ ಪಂದ್ಯ ವೀಕ್ಷಿಸಲು ತಮ್ಮ ಪುಟ್ಟ ಮಗುವಿನ ಜೊತೆ ಬೈಕ್ ನಲ್ಲಿ ಹೋಗುವಾಗ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಈ ಪರಿಣಾಮ ಮೂವರು ಕೆಳಗೆ ಬಿದ್ದಿದ್ದಾರೆ.
ಬಿಎಂಟಿಸಿ ಬಸ್ ನ ಚಕ್ರದಡಿ ಸಿಲುಕಿದ ಸೀಮಾ ಹೆಲ್ಮೆಟ್ ಧರಿಸಿದ್ದರೂ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮಗು ಗಾನವಿ, ಪತಿ ಗುರುಮೂರ್ತಿ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ.
ಘಟನೆ ಬಳಿಕ ಯಾವ ಒಬ್ಬ ಬಿಎಂಟಿಸಿ ಅಧಿಕಾರಿಯೂ ಬಂದಿಲ್ಲ. ನ್ಯಾಯ ಕೊಡಿಸುವಂತೆ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಗೃಹಿಣಿ ಸೀಮಾ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.