ಆಂಧ್ರಪ್ರದೇಶ: ಕಾಕಿನಾಡ ಜಿಲ್ಲೆಯ ಫೈಬರ್ ಬೋಟ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 40 ದೋಣಿಗಳು ಸುಟ್ಟು ಕರಕಲಾಗಿರುವ ಘಟನೆ ಶನಿವಾರ ನಡೆದಿದೆ.
ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡು ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರೂ ಸಹ ಕನಿಷ್ಠ 40 ಬೋಟ್ ಸುಟ್ಟು ಭಸ್ಮವಾಗಿವೆ.
ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.