ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 1 ಬ್ಯುಸಿನೆಸ್ ಕರೆಸ್ಪಾಂಡೆಂಟ್ ಸೂಪರ್ವೈಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 24, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಹಾಕಬೇಕು. ಉದ್ಯೋಗಾಂಕ್ಷಿಗಳು ತಡಮಾಡದೇ ಈ ಕೂಡಲೇ ಅಪ್ಲಿಕೇಶನ್ ಹಾಕಿ.
ವಿದ್ಯಾರ್ಹತೆ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ, ಪದವಿ, ಎಂಬಿಎ, ಎಂಸಿಎ, ಎಂಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 65 ವರ್ಷ ಮೀರಿರಬಾರದು. ಅಭ್ಯರ್ಥಿಗಳಿಗೆ ಮೀಸಲಾತಿ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 10,000- 15,000
ಉದ್ಯೋಗದ ಸ್ಥಳ:
ಹಾಸನ, ಚಿಕ್ಕಮಗಳೂರು
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಪ್ರಾದೇಶಿಕ ವ್ಯವಸ್ಥಾಪಕರು
ಬ್ಯಾಂಕ್ ಆಫ್ ಬರೋಡಾ
ಪ್ರಾದೇಶಿಕ ಕಚೇರಿ-ಹಾಸನ
ನಂ.208
1 ನೇ ಮಹಡಿ
ಸಂತೆಪೇಟೆ
APMC ಯಾರ್ಡ್ ಹಿಂದೆ
BM ರಸ್ತೆ
ಹಾಸನ-573201
ಕರ್ನಾಟಕ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 24, 2023