ಮನೆ ಅಪರಾಧ ದಾವಣಗೆರೆ: ಟೈರ್ ಸ್ಫೋಟಗೊಂಡು ಬೊಲೆರೊ ಟೆಂಪೋ ಪಲ್ಟಿ- ಮೂವರು ಸಾವು

ದಾವಣಗೆರೆ: ಟೈರ್ ಸ್ಫೋಟಗೊಂಡು ಬೊಲೆರೊ ಟೆಂಪೋ ಪಲ್ಟಿ- ಮೂವರು ಸಾವು

0

ದಾವಣಗೆರೆ: ಬೊಲೆರೊ ಟೆಂಪೋ ವಾಹನದ ಟೈಯರ್ ಸ್ಫೋಟಗೊಂಡು ವಾಹನ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ದಾವಣಗೆರೆ ನಗರದ ಹೊರವಲಯದ ಪಂಜಾಬಿ ಡಾಬಾ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ತಡ ರಾತ್ರಿ ನಡೆದಿದೆ.

ಅಪಘಾತದಲ್ಲಿ ಆರು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ‌ಓರ್ವನ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತ ಹಾಗೂ ‌ಗಾಯಾಳುಗಳು ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯಂ‌ತಾಲೂಕಿನ ಸಿಂಗರಾಜನಹಳ್ಳಿ ಗ್ರಾಮದ ನಿವಾಸಿಗಳು ಎಂಬ ಮಾಹಿತಿ ಲಭ್ಯವಾಗಿದೆ.

ಹಾವೇರಿ ಜಿಲ್ಲೆಯ ಬ್ಯಾಡಗಿಯಿಂದ ಮೆಣಸಿನಕಾಯಿ ತೆಗೆದುಕೊಂಡು ತಮ್ಮೂರಿಗೆ ವಾಪಸ್ಸಾಗುವಾಗ ಘಟನೆ ನಡೆದಿದೆ.

ಹಿಂದಿನ ಲೇಖನಬೈಕ್​ ವ್ಹೀಲಿಂಗ್ ಹುಚ್ಚಾಟಕ್ಕೆ ಯುವಕ ಬಲಿ: ಮೂವರಿಗೆ ಗಾಯ
ಮುಂದಿನ ಲೇಖನಬೆಂಗಳೂರು: ಪ್ಲಾಸ್ಟಿಕ್ ಡ್ರಮ್ ನಲ್ಲಿ ತುಂಡರಿಸಿದ ಸ್ಥಿತಿಯಲ್ಲಿ ವೃದ್ಧೆಯ ಮೃತದೇಹ ಪತ್ತೆ