ಮುಂಬಯಿ: ಬಾಲಿವುಡ್ ನಟ ಅವರಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ ಬೆಳಗ್ಗೆ(ಅ.1ರಂದು) ನಟ ಶಿವಸೇನೆ ನಾಯಕ ಗೋವಿಂದ ಅವರ ಕಾಲಿಗೆ ಅವರದೇ ರಿವಾಲ್ವರ್‌ನಿಂದ ಗುಂಡು ತಗುಲಿದ ಹಿನ್ನೆಲೆಯಲ್ಲಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಕಸ್ಮಿಕವಾಗಿ ಅವರ ರಿವಾಲ್ವರ್ ನಿಂದ ಗುಂಡು ತಗುಲಿದೆ ಎನ್ನಲಾಗಿದೆ.
ಮುಂಜಾನೆ 4:45ಕ್ಕೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅವರು ತನ್ನ ರಿವಾಲ್ವರ್ ನ್ನು ಕ್ಲೀನ್ ಮಾಡುವಾಗ ಆಕಸ್ಮಿಕವಾಗಿ ಗುಂಡು ಅವರ ಕಾಲಿಗೆ ಬಂದು ತಗುಲಿದೆ ಎಂದು ವರದಿಯಾಗಿದೆ.
ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.