ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಕಳ್ಳನೋರ್ವ ಚಾಕುವಿನಿಂದ ದಾಳಿ ಮಾಡಿರುವ ಘಟನೆ ನಡೆದಿದೆ.
ಹಲ್ಲೆಯಿಂದ ನಟ ಗಾಯಗೊಂಡಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂಬೈ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮುಂಬೈನಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ಕಳ್ಳತನಕ್ಕೆಂದು ಬಂದ ವ್ಯಕ್ತಿಯೇ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.














