ಮನೆ ಅಂತಾರಾಷ್ಟ್ರೀಯ ಉತ್ತರ ಅಫ್ಘಾನಿಸ್ತಾನದ ಧಾರ್ಮಿಕ ಶಾಲೆಯಲ್ಲಿ ಬಾಂಬ್ ಸ್ಫೋಟ: 19 ಮಂದಿ ಸಾವು

ಉತ್ತರ ಅಫ್ಘಾನಿಸ್ತಾನದ ಧಾರ್ಮಿಕ ಶಾಲೆಯಲ್ಲಿ ಬಾಂಬ್ ಸ್ಫೋಟ: 19 ಮಂದಿ ಸಾವು

0
ಸಾಂದರ್ಭಿಕ ಚಿತ್ರ

ಕಾಬೂಲ್: ಉತ್ತರ ಅಫ್ಘಾನಿಸ್ತಾನದ ಧಾರ್ಮಿಕ ಶಾಲೆಯೊಂದರಲ್ಲಿ ಬುಧವಾರ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 12 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 19 ಜನರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಉತ್ತರ ಸಮಂಗನ್ ಪ್ರಾಂತ್ಯದ ರಾಜಧಾನಿ ಐಬಕ್‌’ನಲ್ಲಿ ಮಧ್ಯಾಹ್ನದ ಪ್ರಾರ್ಥನೆಯ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದೆ ಎಂದು ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ನಫಿ ಟಾಕೋರ್ ಹೇಳಿದರು.

ದಾಳಿಯ ಹೊಣೆಯನ್ನು ಇಲ್ಲಿಯವರೆಗೆ ಯಾರೂ ಹೊತ್ತುಕೊಂಡಿಲ್ಲ.ಆಗಸ್ಟ್ 2021 ರಲ್ಲಿ ತಾಲಿಬಾನ್ ಉಗ್ರರು ಅಧಿಕಾರ ವಹಿಸಿಕೊಂಡ ನಂತರ ನಡೆಯುತ್ತಿರುವ ಹಿಂಸಾಚಾರಕ್ಕೆ ಇಸ್ಲಾಮಿಕ್ ಸ್ಟೇಟ್ (ಐಎಸ್) ಕಾರಣ ಎಂದು ಹೇಳಲಾಗುತ್ತದೆ. ಅಫ್ಘಾನಿಸ್ತಾನದ ಅಲ್ಪಸಂಖ್ಯಾತ ಶಿಯಾ ಜನಸಂಖ್ಯೆಯನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಹಿಂದಿನ ಲೇಖನಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕರಣ: ತಾತ್ಕಾಲಿಕ ಆಯ್ಕೆಪಟ್ಟಿಗೆ ತಡೆ ವಿಧಿಸಿದ ಹೈಕೋರ್ಟ್
ಮುಂದಿನ ಲೇಖನಬೀದಿ ನಾಯಿಗಳ ದಾಳಿಗೆ ಮಗು ಬಲಿ