ಮನೆ ರಾಷ್ಟ್ರೀಯ ಬಿಹಾರದ ಮದರಸಾದಲ್ಲಿ ಬಾಂಬ್ ಸ್ಫೋಟ: ಮೌಲ್ವಿ ಸೇರಿ ಇಬ್ಬರಿಗೆ ಗಾಯ

ಬಿಹಾರದ ಮದರಸಾದಲ್ಲಿ ಬಾಂಬ್ ಸ್ಫೋಟ: ಮೌಲ್ವಿ ಸೇರಿ ಇಬ್ಬರಿಗೆ ಗಾಯ

0

ಬಿಹಾರ:  ಬಿಹಾರದ ಛಾಪ್ರಾ ಜಿಲ್ಲೆಯ ಗರ್ಖಾದ ಮೋತಿರಾಜ್‌ಪುರದ ಮದರಸಾದಲ್ಲಿ ಬಾಂಬ್ ಸ್ಫೋಟಗೊಂಡು ಮೌಲ್ವಿ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ.

Join Our Whatsapp Group

ಗಾಯಗೊಂಡವರಲ್ಲಿ ಮಸೀದಿಯ ಮೌಲ್ವಿ ಇಮಾಮುದ್ದೀನ್ ಕೂಡ ಸೇರಿದ್ದಾರೆ.

ಮದರಸಾದೊಳಗೆ ಬಿದ್ದಿದ್ದ ಬಾಂಬ್​ ಅನ್ನು ಅಲ್ಲಿದ್ದ ವಿದ್ಯಾರ್ಥಿಯೊಬ್ಬ ಚೆಂಡು ಎಂದು ತಿಳಿದು ಎಸೆದಿದ್ದಾನೆ. ಘಟನೆಯಲ್ಲಿ ಮೌಲ್ವಿ ಹಾಗೂ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಾಂಬ್ ತಯಾರಿಸುವಾಗ ಸ್ಫೋಟ ಸಂಭವಿಸಿದ್ದು, ಇಮಾಮುದ್ದೀನ್ ಮತ್ತು ವಿದ್ಯಾರ್ಥಿಯೊಬ್ಬ ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ಬಗ್ಗೆ ಮಾಹಿತಿ ಲಭಿಸಿದ ತಕ್ಷಣ ಹೆಚ್ಚುವರಿ ಎಸ್ಪಿ ರಾಜ್ ಕಿಶೋರ್ ಸಿಂಗ್ ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಫೋರೆನ್ಸಿಕ್ ತಂಡವನ್ನು ಸ್ಥಳಕ್ಕೆ ಕರೆಸಲಾಗಿದೆ ಎಂದು ರಾಜಕಿಶೋರ್ ಸಿಂಗ್ ಹೇಳಿದ್ದಾರೆ.

ಹಿಂದಿನ ಲೇಖನಹುಬ್ಬಳ್ಳಿ ಅಂಜಲಿ ಹಂತಕನ ಪತ್ತೆಗೆ ಎರಡು ವಿಶೇಷ ತಂಡ ರಚನೆ: ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ
ಮುಂದಿನ ಲೇಖನಚೆಕ್ ದುರುಪಯೋಗ ಆರೋಪ: ಪಾಲಿಕೆ ಆರೋಗ್ಯಾಧಿಕಾರಿ ವಿರುದ್ಧ ಪ್ರಕರಣ ದಾಖಲು