ಮನೆ ರಾಜ್ಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ: ಪ್ರಕರಣ ದಾಖಲಿಸಿಕೊಂಡ ಎನ್ ಐ ಎ

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ: ಪ್ರಕರಣ ದಾಖಲಿಸಿಕೊಂಡ ಎನ್ ಐ ಎ

0

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಆದ ಬಾಂಬ್ ಸ್ಫೋಟ ಘಟನೆ ಸಂಬಂಧ NIA ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ಇನ್ನೆರಡು ದಿನಗಳಲ್ಲಿ ಅಧಿಕೃತವಾಗಿ ತನಿಖೆ‌ ಕೈಗೆತ್ತಿಕೊಳ್ಳಲಿದ್ದಾರೆ.

UAPA ಅಡಿ ಹೆಚ್ ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಪ್ರಕರಣದ ಗಂಭೀರತೆ ಅರಿತು ಎನ್ ​​ಐಎ ಪ್ರಕರಣ ದಾಖಲಿಸಿಕೊಂಡಿದೆ.

ಬಾಂಬ್ ಸ್ಫೋಟ ಸಂಭವಿಸಿದ ಬೆಂಗಳೂರಿನ ರಾಮೇಶ್ವರಂ ಕೆಫೆಗೆ ಭಾನುವಾರ ಭೇಟಿ ನೀಡಿದ ಸಿಸಿಬಿ ಪೊಲೀಸರು ಸ್ಥಳ ಮಹಜರು ನಡೆಸಿದರು.

ಸಿಸಿಬಿ ತನಿಖಾಧಿಕಾರಿ ನವೀನ್ ಕುಲಕರ್ಣಿ ಮತ್ತು ಟೀಂ, ರಾಮೇಶ್ವರಂ ಕೆಫೆ ಮ್ಯಾನೇಜರ್‌, ಸಿಬ್ಬಂದಿ ಸಮ್ಮುಖದಲ್ಲಿ ಮಹಜರು ನಡೆಸಿದ್ರು. ಬಾಂಬರ್‌ ಎಂಟ್ರಿಯಾದ ಸ್ಥಳ, ಓಡಾಡಿದ್ದ ಸ್ಥಳದಲ್ಲಿ ಪರಿಶೀಲನೆ ಮಾಡಿದ್ರು. ಜೊತೆಗೆ ಶಂಕಿತರನ್ನ ಆಡುಗೋಡಿ ಟೆಕ್ನಿಕಲ್ ಸೆಲ್​ ಗೆ ಕರೆತಂದು ವಿಚಾರಣೆ ನಡೆಸಿದರು.

ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಪತ್ತೆಗಾಗಿ ಪೊಲೀಸರು ಹರಸಾಹಸ ಪಡ್ತಿದ್ದಾರೆ. ಟೈಮ್ ಟ್ರಾವೆಲ್ ರೀತಿ ಎರಡೂ ಕಡೆ ಹುಡುಕಾಟ ನಡೆಸ್ತಿದ್ರೂ, ಆರೋಪಿಯ ಜಾಡು ಮಾತ್ರ ಸಿಗ್ತಿಲ್ಲ. ಆರೋಪಿ‌ ಪತ್ತೆ ಆಗದಿದ್ರೆ ಪೊಲೀಸರು ರೇಖಾಚಿತ್ರ ಬಿಡುಗಡೆಗೆ ಮುಂದಾಗಿದ್ದಾರೆ.

ರಾಮೇಶ್ವರ ಕೆಫೆಗೆ ಒಂದು ಕಿಮೀ ಇರುವ ಒಂದು ಸ್ಥಳದಲ್ಲಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದಾನೆ. ಆದ್ರೆ, ಗ್ರಾಫೈಟ್ ಇಂಡಿಯಾ ಸರ್ಕಲ್​ನಲ್ಲಿ ರೋಡ್ ಕ್ರಾಸ್ ಮಾಡಿ ಬಂದು ಬಸ್ ಏರಿದ್ದಾನೆ.