ಮನೆ ರಾಜ್ಯ ರಾಮೇಶ್ವರಂ ಕೆಫೆ ರೀತಿಯಲ್ಲೇ ಬಾಂಬ್ ಬ್ಲಾಸ್ಟ್: ಇಮೇಲ್ ಮೂಲಕ ಬೆದರಿಕೆ

ರಾಮೇಶ್ವರಂ ಕೆಫೆ ರೀತಿಯಲ್ಲೇ ಬಾಂಬ್ ಬ್ಲಾಸ್ಟ್: ಇಮೇಲ್ ಮೂಲಕ ಬೆದರಿಕೆ

0
ಸಾಂದರ್ಭಿಕ ಚಿತ್ರ

ಬೆಂಗಳೂರು: 2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದ್ರೆ ಬಸ್ , ರೈಲು, ಬಸ್ ಸ್ಟಾಂಡ್ ಸೇರಿ ಹಲವಾರು ಕಡೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಇಮೇಲ್  ಮೂಲಕ ಬೆದರಿಕೆ ಹಾಕಿರುವುದು ಬೆಳಕಿಗೆ ಬಂದಿದೆ.

ಸಿಎಂ, ಗೃಹ ಮಂತ್ರಿ, ಡಿಸಿಎಂ, ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್​ಗೆ ಬೆದರಿಕೆ ಇ ಮೇಲ್  ಬಂದಿದ್ದು, ರಾಮೇಶ್ವರಂ ಕೆಫೆ ರೀತಿಯಲ್ಲೇ ಬಾಂಬ್ ಸ್ಫೋಟಿರುವುದಾಗಿ  ಇಮೇಲ್​ ನಲ್ಲಿ ಬೆದರಿಕೆ ಹಾಕಲಾಗಿದೆ.

ಈ ಇಮೇಲ್​ ಬೆದರಿಕೆ ಸಂಬಂಧ ಸಿಸಿಬಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.  10786progongmail.com ಎನ್ನುವ ಮೇಲ್ ಐಡಿಯಿಂದ ಬೆದರಿಕೆ ಬಂದಿದ್ದು, ಸದ್ಯ ಸಿಸಿಬಿ ಪೊಲೀಸರು ಈ ಇಮೇಲ್ ಬಗ್ಗೆ ತನಿಖೆ ನಡೆಸಿದ್ದಾರೆ.