ಮನೆ ಅಪರಾಧ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ : ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ : ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ

0

ನವದೆಹಲಿ : ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು,ಮಹಾರಾಷ್ಟ್ರದ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಕೊಚ್ಚಿ-ದೆಹಲಿ ಮಾರ್ಗದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಫ್ಲೈಟ್ಸ್ಟ್ಯಾಟ್ಸ್ ಬೈ ಸಿರಿಯಮ್ ವೆಬ್ಸೈಟ್ ಪ್ರಕಾರ, ವಿಮಾನವು ಬೆಳಿಗ್ಗೆ 9:20 ಕ್ಕೆ ಕೊಚ್ಚಿ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 12:35 ಕ್ಕೆ ದೆಹಲಿಯಲ್ಲಿ ಇಳಿಯಬೇಕಿತ್ತು. ಕೊಚ್ಚಿ ವಿಮಾನ ನಿಲ್ದಾಣದ ಮೂಲಗಳು, ದೆಹಲಿಗೆ ಹೋಗುತ್ತಿದ್ದ ಇಂಡಿಗೋ ವಿಮಾನವು ಮಂಗಳವಾರ ಬೆಳಿಗ್ಗೆ ನಿರ್ದಿಷ್ಟ ವಿಮಾನ ಸಂಖ್ಯೆಯನ್ನು ಒದಗಿಸಿ ಬಾಂಬ್ ಬೆದರಿಕೆ ಬಂದಿದೆ ಎಂದು ತಿಳಿಸಿದೆ.

ಮಸ್ಕತ್ – ಕೊಚ್ಚಿ – ದೆಹಲಿಯಿಂದ ಹೊರಟಿದ್ದ ಇಂಡಿಗೋ ವಿಮಾನ 6E 2706 ಬಾಂಬ್ ಬೆದರಿಕೆ ಬಂದ ನಂತರ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ, ತನಿಖೆ ನಡೆಯುತ್ತಿದೆ, ಇಲ್ಲಿಯವರೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.