ಮನೆ ಅಪರಾಧ ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆ ಕರೆ

ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆ ಕರೆ

0

ಬೆಂಗಳೂರು(Bengaluru): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಆರ್ ಆರ್ ನಗರದಲ್ಲಿರುವ ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆಗೆ  ಇ-ಮೇಲ್  ಮೂಲಕ ಕಿಡಿಗೇಡಿಗಳು ಬಾಂಬ್  ಬೆದರಿಕೆ ಸಂದೇಶ ಕಳುಹಿಸಿದ್ದಾರೆ.

ನಿನ್ನೆ (ಭಾನುವಾರ) ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿದ್ದಾರೆ.

ಇಂದು ಬೆಳಿಗ್ಗೆ ಶಾಲೆಗೆ ಬಂದು ಪರಿಶೀಲಿಸುವ ವೇಳೆ ಬೆದರಿಕೆ ಸಂದೇಶ ಪತ್ತೆಯಾಗಿದೆ. ಶಾಲಗೆ ಆರ್ ಆರ್ ನಗರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಶಾಲೆಯಿಂದ ಮಕ್ಕಳನ್ನು ಶಿಫ್ಟ್ ಮಾಡಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದೆ.