ಮನೆ ಅಪರಾಧ ಆರ್​ಬಿಐ ಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ: ಪೊಲೀಸ್ ಭದ್ರತೆ

ಆರ್​ಬಿಐ ಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ: ಪೊಲೀಸ್ ಭದ್ರತೆ

0

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಗೆ ಬಾಂಬ್ ಬೆದರಿಕೆಯೊಂದು ಬಂದಿರುವುದಾಗಿ ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.

Join Our Whatsapp Group

 ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗಳು ಫೆಬ್ರವರಿ 12 ರ ಗುರುವಾರ ಮಧ್ಯಾಹ್ನ ಭಾರತೀಯ ರಿಸರ್ವ್ ಬ್ಯಾಂಕ್‌ ನ ಅಧಿಕೃತ ವೆಬ್‌ಸೈಟ್‌ಗೆ ರಷ್ಯನ್ ಭಾಷೆಯಲ್ಲಿ ಬೆದರಿಕೆ ಇ-ಮೇಲ್ ಬಂದಿದ್ದು ಆರ್ ಬಿಐ ಕಚೇರಿಯನ್ನು ಸ್ಫೋಟ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಅಲರ್ಟ್ ಆಗಿದ್ದಾರೆ.

ಆರ್​ಬಿಐ ಕಚೇರಿ ಸುತ್ತ ಹೆಚ್ಚಿನ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಸದ್ಯ ಇ ಮೇಲ್ ನ ಮೂಲ ಪತ್ತೆಹಚ್ಚುವ ಕಾರ್ಯ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.