ಮನೆ ಅಪರಾಧ ಬೆಂಗಳೂರು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ: ಇ-ಮೇಲ್ ಮೂಲಕ ಸಂದೇಶ

ಬೆಂಗಳೂರು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ: ಇ-ಮೇಲ್ ಮೂಲಕ ಸಂದೇಶ

0
ಸಾಂದರ್ಭಿಕ ಚಿತ್ರ

ಬೆಂಗಳೂರು : ಬೆಂಗಳೂರಿನ ಖಾಸಗಿ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಬೆಂಗಳೂರಿನ ಪಾಟರಿ ರಸ್ತೆಯಲ್ಲಿರುವ ಕ್ಲಾರೆನ್ಸ್ ಶಾಲೆಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಪುಲಕೇಶಿನಗರ ಠಾಣಾ ವ್ಯಾಪ್ತಿಯಲ್ಲಿರುವ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ನಿಮ್ಮ ಸ್ಕೂಲ್ ನಲ್ಲಿ ಬಾಂಬ್ ಇಟ್ಟಿದ್ದೇವೆ ಎಂದು ಖಾಸಗಿ ಶಾಲೆಗೆ ಇ-ಮೇಲ್ ಬಂದಿದೆ. ಕೂಡಲೇ ಪೊಲೀಸರಿಗೆ ಶಾಲಾ ಆಡಳಿತ ಮಂಡಳಿ ಮಾಹಿತಿ ನೀಡಿದೆ.