ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ 10ಕ್ಕೂ ಹೆಚ್ಚು ಶಾಲೆಗಳಿಗೆ ಬುಧವಾರ ಬೆಳಗ್ಗೆ ಬಾಂಬ್ ಬೆದರಿಕೆ ಬಂದಿದೆ.
ಮಯೂರ್ ವಿಹಾರ್ ನಲ್ಲಿರುವ ಮದರ್ ಮೇರಿ ಶಾಲೆ, ದ್ವಾರಕಾದಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್, ಚಾಣಕ್ಯಪುರಿಯ ಸಂಸ್ಕೃತಿ ಶಾಲೆ, ವಸಂತ್ ಕುಂಜ್‌ನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್ ಮತ್ತು ಸಾಕೇತ್‌ನ ಅಮಿಟಿ ಸ್ಕೂಲ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇ – ಮೇಲ್‌ಗಳ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಎಲ್ಲ ಐದು ಶಾಲೆಗಳಲ್ಲಿ ತೀವ್ರ ಪರಿಶೀಲನೆ ಕೈಗೊಳ್ಳಲಾಗಿದೆ.
ಬಾಂಬ್ ಪತ್ತೆ ತಂಡ, ಬಾಂಬ್ ನಿಷ್ಕ್ರಿಯ ದಳ ಮತ್ತು ದೆಹಲಿ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಶಾಲೆಗೆ ಧಾವಿಸಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವುದರಿಂದ ಹಿಂದೆ ಒಬ್ಬ ವ್ಯಕ್ತಿ ಇದ್ದಾನೆ ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೆಹಲಿ ಪೊಲೀಸ್ ವಿಶೇಷ ಸೆಲ್ ಸೇರಿದಂತೆ ಭದ್ರತಾ ಸಂಸ್ಥೆಗಳು ಬಾಂಬ್ ಬೆದರಿಕೆ ಬಂದಿರುವ ಇ – ಮೇಲ್ ನ ಮೂಲವನ್ನು ಹುಡುಕುತ್ತಿವೆ.